ಮಂಗಳೂರು: ಮಂಗಳವಾರ ಭಾರೀ ಅವಾಂತರ ಸೃಷ್ಟಿಸಿದ್ದ ಮಳೆರಾಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸ್ವಲ್ಪ ತನ್ನ ರೌದ್ರವತಾರ ನಿಲ್ಲಿಸಿದ್ದಾನೆ.
ನಿನ್ನೆ ಬೆಳಗ್ಗೆಯಿಂದ ರಾತ್ರಿಯವರೆಗೆ ಸುರಿದ ಮಹಾಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರು ತತ್ತರಿಸಿದ್ದರು. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಇವರಿಗೆ ಪರಿಹಾರ ನೀಡುವ ಭರವಸೆ ನೀಡಲಾಗಿದೆ. ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜಲಾವೃತ್ತವಾಗಿದ್ದು, ಅಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.
ಹೀಗಾಗಿ ಇಂತಹ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಳೆಯಿಂದಾಗಿ ಇಂದೂ ಕೂಡ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನದಿ ತೀರ, ಸಮುದ್ರ ತೀರಗಳಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮಂಗಳೂರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಆಗಮಿಸಿ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ.
