ಬೆಂಗಳೂರು: ಸೋಮವಾರ ನಡೆದ ರಾಮನಗರ ಜಿಲ್ಲೆಯ ಚೆನ್ನಪಟ್ಟಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡಬೇಕು ಎಂಬ ನಿರ್ಧಾರವನ್ನು ಸಿಎಂ ತುಸು ಬದಲಾವಣೆಯನ್ನು ಮಾಡಿದ್ದಾರೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ಪಾಸ್ ನೀಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಲಕ್ಷಾಂತರ ರೂ.ಡೋನೆಷನ್ ಕೊಟ್ಟು ಖಾಸಗಿ ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ಅಗತ್ಯವಿಲ್ಲ ಎಂದಿದ್ದಾರೆ.
ಅಲ್ಲದೇ ಬಿಜೆಪಿ ಪಕ್ಷವು ಎಬಿವಿಪಿಯಂತಹ ಸಂಘಟನೆಯನ್ನು ಮುಂದಿಟ್ಟು ಉಚಿತ ಬಸ್ಪಾಸ್ ಕುರಿತು ರಾಜಕೀಯ ನಡೆಸುವ ಆಲೋಚನೆ ಬೇಡ ಎಂದು ತಿರುಗೇಟು ನೀಡಿದ್ದಾರೆ.