ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮೂಡುಬಿದಿರೆ ಹಾಗೂ ಸ.ಹಿ.ಪ್ರಾ.ಶಾಲೆ ಪುತ್ತಿಗೆ ಇವರ ಸಹಯೋಗದಲ್ಲಿ ಹಂಡೇಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸೋಮವಾರ ಜರುಗಿತು.

Prathibha karanji
ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಮೋಹನ ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಪ್ರದರ್ಶಿಸಲು ಸೂಕ್ತವಾದ ಅವಕಾಶವಾಗಿದೆ ಎಂದರು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಹಾಗೂ ತಾ.ಪಂ. ಸದಸ್ಯೆ ವನಿತಾ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಪುತ್ತಿಗೆ ದೇವಸ್ಥಾನದ ಅರ್ಚಕ ಅಡಿಗಳ್ ಶ್ರೀನಿವಾಸ್ ಭಟ್ ಆಶೀರ್ವಚನವಿತ್ತರು.

ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಪುತ್ತಿಗೆ ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ಶೆಟ್ಟಿ, ಜಿ.ಪಂ. ಸದಸ್ಯ ಸುಚರಿತ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ, ಗ್ರಾ.ಪಂ. ಸದಸ್ಯೆಯರಾದ ಶುಭಾ ಹೆಬ್ಬಾರ್, ಸುಮಿತ್ರಾ, ಶಶಿಧರ್ ಅಂಚನ್, ನಾಗವರ್ಮ ಜೈನ್, ಶಶಿಧರ್ ನಾಯಕ್, ಕುಶಲಾ, ದಿನೇಶ್, ನಾಗರಾಜ್, ಚಂದ್ರಶೇಖರ್, ನೋಡಲ್ ಅಧಿಕಾರಿ ಶಿವಾನಂದ ಕಾಯ್ಕಿಣಿ, ಬಿ.ಆರ್.ಪಿ. ಗೀತಾ, ಸಿ.ಆರ್.ಪಿ. ಸರೋಜಾ ಬಾೈ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ನಾಗೇಶ್, ಅನುದಾನಿತ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಾದಿರಾಜ ಮಣ್ಮನಾಯ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಅನುಸೂಯ ಸ್ವಾಗತಿಸಿ, ಶಿಕ್ಷಕ ಜೋಸೆಫ್ ಮೊಂತೆರೋ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಜೋಯ್ಸ್ ಮೋನಿಸ್ ವಂದಿಸಿದರು.

By suddi9

Leave a Reply

Your email address will not be published. Required fields are marked *