ಮೂಡುಬಿದಿರೆ : ಭಾಎತೀಯ ಜೈನ್ ಮಿಲನ್ ಮೂಡುಬಿದಿರೆ ವಲಯ-8, ಶಾಖೆ 832 ಇದರ ಜುಲೈ ತಿಂಗಳ ಮಾಸಿಕ ಸಭೆ ಮತ್ತು ಆಟಿಡೊಂಜಿ ನೆಂಪು ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳು ಧವಳಾ ಕಾಲೇಜಿನ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು.

ಜೈನ ಪ.ಪೂ ಕಾಲೇಜಿನ ನಿವೃತ್ತ ಪ್ರಾಚಾರ್ಯ ಕೆ.ಗುಣಪಾಲ ಕಡಂಬ ಮುಖ್ಯ ಅತಿಥಿಯಾಗಿ ಭಾಗವಹಿಸಿ ಆಟಿ ತಿಂಗಳ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿದರು.

jain milan
ನಂತರ ನಡೆದ ಮಾಸಿಕ ಸಭೆಯಲ್ಲಿ ಮೂಡುಬಿದಿರೆ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಮಾದಕ ದ್ರವ್ಯ ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದರ ಬಗ್ಗೆ ಮತ್ತು ಮಳೆಗಾಲದಲ್ಲಿ ಹೆಚ್ಚುತ್ತಿರುವ ಕಳ್ಳತನಕ್ಕೆ ಮುಂಜಾಗೃತಕ್ರಮವನ್ನು ವಹಿಸುವ ಕುರಿತು, ಬೀಟ್ ವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಭಾರತೀಯ ಜೈನ್ ಮಿಲನ್‍ನ ಮೂಡುಬಿದಿರೆಯ ಅಧ್ಯಕ್ಷೆ ಶ್ವೇತಾ ಜೈನ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಮಾತು ಕಡಿಮೆ ಮಾಡಿ ಕೆಲಸಗಳನ್ನು ನಾವೆಲ್ಲರೂ ಹೆಚ್ಚು ಹೆಚ್ಚಾಗಿ ಮಾಡಬೇಕು ಎಂದ ಅವರು ಮುಂದಿನ ದಿನಗಳಲ್ಲಿ ಯಾವ ರೀತಿಯಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂಬುದರ ಬಗ್ಗೆ ಮತ್ತು ಯಾವ ರೀತಿಯಾಗಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂಬುದರ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ವಲಯಾಧ್ಯಕ್ಷ ಜಯರಾಜ್ ಕಂಬ್ಳಿ, ನೇಮಿರಾಜ್ ಹೆಗ್ಡೆ ಮತ್ತು ಹರೀಶ್ ಕುಮಾರ್ ಉಪಸ್ಥಿತರಿದ್ದರು.
ಪುರಸಭಾ ಸದಸ್ಯ ಬಾಹುಬಲಿ ಪ್ರಸಾದ್ ಸ್ವಾಗತಿಸಿದರು. ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ಮಾಸಿಕ ತಿಂಗಳ ವರದಿ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿರುವವರ ವಿವರವನ್ನು ನೀಡಿದರು. ಧನಂಜಯ ಕಾರ್ಯಕ್ರಮ ನಿರೂಪಿಸಿದರು. ಖಜಾಂಜಿ ದಿವ್ಯ ವೀರೇಂದ್ರ ವಂದಿಸಿದರು.

By suddi9

Leave a Reply

Your email address will not be published. Required fields are marked *