ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್, ಪಿಲಾತಬೆಟ್ಟು ಗ್ರಾಮ ಪಂಚಾಯತ್, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘ, ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್ ನಯನಾಡು, ಪ್ರಾಥಮಿಕ ಆರೋಗ್ಯ ಕೇಂದ್ರ ಪುಂಜಾಲಕಟ್ಟೆ, ದೇರಳಕಟ್ಟೆ   ಯೆನಪೋಯ ಡೀಮ್ಡ್ ಟು ಬಿ. ಯೂನಿವರ್ಸಿಟಿಯ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ಕೇಂದ್ರ ಹಾಗೂ ದಂತ ವಿಭಾಗ,   ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರವಿವಾರ ಜರಗಿತು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ ರಾವ್ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಲು ಎಲ್ಲಾ ಅರ್ಹತೆ ಹೊಂದಿದೆ. ತಾಂತ್ರಿಕ ಕಾರಣಗಳಿಂದ ಸಮುದಾಯ ಆರೋಗ್ಯ ಕೇಂದ್ರವಾಗಿಸಲು ಸಾಧ್ಯವಾಗುತ್ತಿಲ್ಲ.ಈ ಬಗ್ಗೆ ಈಗಾಗಲೇ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸರಕಾರ ಅವಕಾಶ ನೀಡಿದಲ್ಲಿ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಪ್ರಥಮ ಆದ್ಯತೆ ನೀಡಲಾಗಿದೆ. ಗ್ರಾಮೀಣ ಜನತೆಯ ಅನಾರೋಗ್ಯ ಸಮಸ್ಯೆಗಳಿಗೆ ಆರೋಗ್ಯ ಶಿಬಿರಗಳು ಸಹಕಾರಿಯಾಗಿದೆ.ನಗರಕ್ಕೆ ತೆರಳಿ ಚಿಕಿತ್ಸೆ ಪಡೆಯಲು ಅಶಕ್ತರಾದವರಿಗೆ ಆರೋಗ್ಯ ಶಿಬಿರ ವರದಾನವಾಗಿದೆ.ಶಿಬಿರ ಆಯೋಜಿಸಿದ ಸಂಘ ಸಂಸ್ಥೆಗಳ ಕಾರ್ಯ ಅಭಿನಂದಾರ್ಹವಾಗಿದೆ ಎಂದು ಹೇಳಿದರು.

shibira

ಜಿ.ಪಂ.ಸದಸ್ಯ, ಸ್ವಸ್ತಿಕ್ ಫ್ರೆಂಡ್ಸ್ ಗೌರವಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಅವರು ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಜನರ ಆರೋಗ್ಯ ರಕ್ಷಣಾ ವ್ಯವಸ್ಥೆ ಜನಸಾಮಾನ್ಯರಿಗೆ ತಲುಪದಂತಾಗಿದೆ.ಗ್ರಾಮೀಣ ಪ್ರದೇಶಗಳನ್ನೊಳಗೊಂಡ ಪುಂಜಾಲಕಟ್ಟೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಲವಾರು ಕೊರತೆಗಳಿಂದ ಜನರಿಗೆ ಆರೋಗ್ಯ ವ್ಯವಸ್ಥೆ ನೀಡಲು ಸಮಸ್ಯೆ ಎದುರಿಸುತ್ತಿದೆ. ಈ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಬೇಕು. ಇಬ್ಬರು ಪೂರ್ಣ ಪ್ರಮಾಣದ ವೈದ್ಯಾ„ಕಾರಿಗಳು ಹಾಗೂ ಸಿಬಂದಿಗಳನ್ನು ನೇಮಕಗೊಳಿಸಬೇಕೆಂದು ಜಿಲ್ಲಾಪಂಚಾಯತ್‍ನಲ್ಲಿ ಐದು ಬಾರಿ ನಿರ್ಣಯ ಕೈಗೊಂಡು ಸರಕಾರಕ್ಕೆ ಮನವಿ ಸಲ್ಲಿಸಿತ್ತು. ಪ್ರತಿಭಟನೆ, ಹೋಮ ನಡೆಸಿದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ವೈದ್ಯಕೀಯ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಹೊಂದಿದ್ದು ಜನರನ್ನು ರೋಗದಿಂದ ದೂರ ಮಾಡಲು ಸಾಧ್ಯವಾಗಿದೆ. ಆರೋಗ್ಯದ ಮುಂಜಾಗ್ರತೆ ವಹಿಸಿ ಅನಾರೋಗ್ಯವನ್ನು ದೂರಮಾಡಬೇಕು. ಆಸ್ಪತ್ರೆಯ ಅಭಿವೃದ್ಧಿಗೆ ಸಮುದಾಯದ ಸಹಭಾಗಿತ್ವ ಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಹರೀಂದ್ರ ಪೈ ಶುಭ ಹಾರೈಸಿದರು. ತಾ.ಪಂ.ಸದಸ್ಯ ರಮೇಶ್ ಪೂಜಾರಿ ಕುಡ್ಮೇರು, ಗುತ್ತಿಗೆದಾರ ಸೀತಾರಾಮ ಆಚಾರ್ಯ, ಪ್ರಾ.ಆ.ಕೇಂದ್ರದ ಆಡಳಿತ ವೈದ್ಯಾ„ಕಾರಿ ಡಾ| ಸತೀಶ್ ಎಂ.ಸಿ., ಯೆನಪೆÇೀಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಡಾ| ವಿದ್ಯಾಲಕ್ಷ್ಮಿ, ಡಾ. ದಿವ್ಯಾ, ಸಾರ್ವಜನಿಕ ಸಂಪರ್ಕಾ„ಕಾರಿ ಭರತ್, ಶ್ರೀ ಕ್ಷೇ.ಧ.ಗ್ರಾ. ಯೋಜನೆ ವಗ್ಗ ವಲಯ ಮೇಲ್ವಿಚಾರಕಿ ನಳಿನಾಕ್ಷಿ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಪ್ರಾ. ಆ. ಕೇಂದ್ರದ ಡಾ. ಸೋಹನ್ ಕುಮಾರ್, ಶ್ರೀಧರನ್‍ಕೆ.ವಿ, ಮತ್ತು ಸಿಬಂದಿ ವರ್ಗ, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‍ನ ಜಯರಾಜ್ ಅತ್ತಾಜೆ, ರತ್ನಾಕರ ಪಿ.ಎಂ.ಮತ್ತಿತರರು ಸಹಕರಿಸಿದರು.
ಖಾರ್ಯಕ್ರಮವನ್ನು ಪ್ರಭಾಕರ ಪಿ.ಎಂ. ಸ್ವಾಗತಿಸಿ, ನಿರೂಪಿಸಿದರು.
ಶಿಬಿರದಲ್ಲಿ ದಂತ ಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ಚಿಕಿತ್ಸೆ, ರಕ್ತದೊತ್ತಡ, ಸಕ್ಕರೆ ಖಾಯಿಲೆ, ನೇತ್ರ ಚಿಕಿತ್ಸೆ, ಸ್ತ್ರೀರೋಗ ವಿಭಾಗ, ಶ್ರವಣ ಚಿಕಿತ್ಸೆಗಳನ್ನು ವ್ಯವಸ್ಥೆಗೊಳಿಸಲಾಗಿದ್ದು 300 ಕ್ಕೂ ಮಿಕ್ಕಿ ಸಾರ್ವಜನಿಕರು ಪ್ರಯೋಜನ ಪಡೆದರು.

By suddi9

Leave a Reply

Your email address will not be published. Required fields are marked *