ಮೂಡುಬಿದಿರೆ : ದ.ಕ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ, ಹೋಲಿ ರೋಸರಿ ಪ್ರೌಢಶಾಲೆ ಇವುಗಳ ಸಹಯೋಗದೊಂದಿಗೆ ಎರಡು ದಿನಗಳ ಕಾಲ ಸ್ವರಾಜ್ಯ ಮೈದಾನದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಮೂಡುಬಿದಿರೆ ವಲಯ ಮಟ್ಟದ “ಕ್ರೀಡಾಕೂಟ 2018-19” ಶುಕ್ರವಾರ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿ, ಕ್ರೀಡಾಕೂಟಗಳಿಂದ ಕ್ರೀಡಾಪಟುಗಳ ಕ್ರೀಡಾ ಸಾಮಥ್ರ್ಯ, ಪ್ರತಿಭೆಯನ್ನು ತೋರಿಸಲು ಅವಕಾಶ. ತಮ್ಮ ಶ್ರಮ ಮತ್ತು ಪ್ರಯತ್ನದ ಮೂಲಕ ಕ್ರೀಡೆಯಲ್ಲಿ ಯಶಸ್ವಿ ಹೊಂದಲು ಸಾಧ್ಯ ಎಂದರು.
ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು ಅಧ್ಯಕ್ಷತೆಯನ್ನು ವಹಿಸಿದ್ದರು. ಮಾಜಿ ಸಚಿಚ ಕೆ.ಅಭಯಚಂದ್ರ ಜೈನ್ ಕ್ರೀಡಾಪಟುಗಳ ಗೌರವ ವಂದನೆ ಸ್ವೀಕರಿಸಿದರು. ಕೋರ್ಪಸ್ ಕ್ರಿಸ್ಟ್ ಚರ್ಚ್ನ ಧರ್ಮಗುರು ಫಾ/ಪೌಲ್ ಸಿಕ್ವೇರಾ ಮತ್ತು ಮಹಮ್ಮದ್ ಮೋನು ಅವರು ಧ್ವಜರೋಹಣಗೈದರು. ಹೋಲಿ ರೋಸರಿ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಹೆಲೆನ್ ಮಿನೇಜಸ್ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು.
ಕ್ರೀಡಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಕ್ರೀಡಾಪಟುಗಳನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಹೊಸಬೆಟ್ಟು ಗ್ರಾ.ಪಂ ಅಧ್ಯಕ್ಷ ಮನೋಜ್ ಆಲ್ವಾರಿಸ್, ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಅಪೋಸ್ತಲಿಕ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಭಗಿನಿ ಐಡಾ ಸಿಕ್ವೇರಾ, ಪ್ರಾಥಮಿಕ ದೈ.ಶಿ.ಶಿ ಸಂಘದ ಅಧ್ಯಕ್ಷ ಪ್ರಶಾಂತ್ ಜೈನ್, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಹೋಲಿ ರೋಸರಿ ಸಂಯುಕ್ತ ಪ.ಪೂ.ಕಾಲೇಜಿನ ಜಂಟಿ ಕಾರ್ಯದರ್ಶಿ ಭಗಿನಿ ನಿವೇದಿತ ಎ.ಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ತೆಲ್ಮಾ ಡೋರಾ ಡಿ”ಸೋಜಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು.
