ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ‘ಚೆನ್ನೈತ್ತೋಡಿ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ’ಯಲ್ಲಿ ಡಿ.22ರಂದು ಶತಮಾನೋತ್ಸವ ಆಚರಣೆ ಸಂಭ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಹಂಝ ಎ.ಬಸ್ತಿಕೋಡಿ ತಿಳಿಸಿದ್ದಾರೆ.
ಬಿ.ಸಿ.ರೋಡಿನಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಈಗಾಗಲೇ ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಗೌರವಾಧ್ಯಕ್ಷತೆಯಲ್ಲಿ ಶತಮಾನೋತ್ಸವ ಸಮಿತಿ ರಚಿಸಲಾಗಿದೆ. ಶಾಲಾಭಿವೃದ್ಧಿ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ವಿವಿಧ ಉಪ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

8btl-Chennaithody
ಕಳೆದ 1918ರಲ್ಲಿ ಕಿರಿಯ ಪ್ರಾಥಮಿಕ ಶಾಲೆಯಾಗಿ ಆರಂಭಗೊಂಡು ಬಳಿಕ ಹಿರಿಯ ಪ್ರಾಥಮಿಕ ಶಾಲೆಯಾಗಿ ಮಾರ್ಪಾಡುಗೊಂಡಿತು. ಸಾವಿರಾರು ಮಂದಿ ಪ್ರತಿಭಾನ್ವಿತರನ್ನು ಸಮಾಜಕ್ಕೆ ನೀಡಿದ ಶಾಲೆಯು ಪ್ರಸಕ್ತ ಒಟ್ಟು 294 ಮಂದಿ ವಿದ್ಯಾರ್ಥಿಗಳನ್ನು ಹೊಂದಿದೆ. ಒಟ್ಟು 12 ಮಂದಿ ಸರ್ಕಾರಿ ಶಿಕ್ಷಕರ ಪೈಕಿ, 8 ಮಂದಿ ಸರ್ಕಾರಿ ಮತ್ತು ಇತರ ನಾಲ್ವರು ಗೌರವ ಶಿಕ್ಷಕರಿದ್ದಾರೆ. ಈಗಾಗಲೇ ಎಲ್‍ಕೆಜಿ, ಯುಕೆಜಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲಾಗಿದ್ದು, ಉನ್ನತೀಕರಿಸಿದ ಈ ಶಾಲೆಯ ಎಂಟನೇ ತರಗತಿಯಲ್ಲಿ 30ಕ್ಕೂ ಮಿಕ್ಕಿ ಮಂದಿ ವಿದ್ಯಾರ್ಥಿಗಳಿದ್ದಾರೆ. ಪ್ರಭಾರ ಮುಖ್ಯ ಶಿಕ್ಷಕರಿದ್ದು, ಪೂರ್ಣಕಾಲಿಕ ಮುಖ್ಯಶಿಕ್ಷಕರನ್ನು ನೇಮಿಸಬೇಕು ಎಂಬುದು ನಮ್ಮ ಬೇಡಿಕೆ ಎಂದರು.

ಸುದ್ದಿಗೋಷ್ಠಿಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಸಂತೋಷ್ ಕುಮಾರ್, ಸಮಿತಿ ಪದಾಧಿಕಾರಿಗಳಾದ  ನಾರಾಯಣ ಶೆಟ್ಟಿ ಪರಾರಿ, ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ, ಗೋಪಾಲ ಅಂಚನ್, ಶೌಕತ್ ಆಲಿಮತ್ತಿತರರು ಉಪಸ್ಥಿತರಿದ್ದರು.

ಸಮಿತಿ ಯೋಜನೆಗಳು:
ರೂ.25ಲಕ್ಷ ವೆಚ್ಚದಲ್ಲಿ ಬಯಲು ರಂಗಮಂದಿರ ನಿರ್ಮಾಣ, ರೂ 10ಲಕ್ಷ ವೆಚ್ಚದಲ್ಲಿ ಅನ್ನದಾಸೋಹ ಭೋಜನ ಶಾಲೆ ನಿರ್ಮಾಣ, ಸುಸಜ್ಜಿತ ಆಟದ ಮೈದಾನ, ಆವರಣ ಗೋಡೆ ನಿರ್ಮಾಣ, ಶೌಚಾಲಯ, ವಾಚನಾಲಯ, ಕ್ರೀಡಾ ಸಾಮಾಗ್ರಿಗಳ ದಾಸ್ತಾನು ಕೊಠಡಿ ನಿರ್ಮಾಣ ಮತ್ತಿತರ ಹಲವು ಯೋಜನೆಗಳನ್ನು ಸಮಿತಿ ಅನುಷ್ಠಾನಗೊಳಿಸಲು ತೀರ್ಮಾನಿಸಿದೆ ಎಂದು ವಿವರಿಸಿದರು.

By suddi9

Leave a Reply

Your email address will not be published. Required fields are marked *