ಸುದ್ದಿ9ಬಂಟ್ವಾಳ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ನಿರ್ದಿಷ್ಟವಾದ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಪರಿಣತಿ ಪಡೆಯಲು ಪ್ರಯತ್ನಿಸಿದಾಗ ಉತ್ತಮ ಕ್ರೀಡಾಪಟುಗಳಾಗಿ ಬೆಳೆಯಲು ಸಾಧ್ಯ ಎಂದು ಜಿಲ್ಲಾ ಉಸ್ತುವರಿ ಸಚಿವ ಬಿ.ರಮನಾಥ ರೈ ಹೇಳಿದರು.
ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬಂಟ್ವಾಳ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಯುಜನ ಒಕ್ಕೂಟ ಬಂಟ್ವಾಳ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳದ ಎಸ್ವಿಎಸ್ ದೇವಳ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಬಂಟ್ವಾಳ ತಾಲೂಕು ಮಟ್ಟದ ದಸರಾ ಹಾಗೂ ರಾಜೀವಗಾಂಧಿ ಖೇಲ್ ಅಭಿಯಾನ್ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪರಿಶ್ರಮವಿದ್ದಾಗ ಮಾತ್ರ ಕ್ರೀಡೆಯಲ್ಲಿ ಉನ್ನತಿ ಪಡೆಯಲು ಸಾಧ್ಯ ಎಂದರು.
ತಾಲೂಕು ಪಂಚಾಯತ್ ಅಧ್ಯಕ್ಷ ಯಶವಂತ ಡಿ., ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಐಡಾ ಸುರೇಶ್, ಜಿ.ಪಂ.ಸದಸ್ಯ ಸಂತೋಷ್ ಕುಮಾರ್ ರೈ, ಪುರಸಭಾ ಸದಸ್ಯರಾದ ಜಗದೀಶ ಕುಂದರ್, ಪ್ರಭಾ ಆರ್.ಸಾಲ್ಯಾನ್, ತಾ.ಪಂ.ಮುಖ್ಯಕಾರ್ಯನಿವರ್ಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ, ತಹಸೀಲ್ದಾರ್ ಮಲ್ಲೇಸ್ವಾಮೀ, ಎಸ್ವಿಎಸ್ ದೇವಳ ವಿದ್ಯಾಸಂಸ್ಥೆಯ ಸಂಚಾಲಕ ಎ.ದಾಮೋದರ ಪ್ರಭು, ಪ್ರಮುಖರಾದ ಬಿ.ಎಚ್.ಖಾದರ್, ಬಿ.ಕೆ.ಇದ್ದಿನಬ್ಬ ಯುವಜನ ಒಕ್ಕೂಟದ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ವೇದಿಕೆಯಲ್ಲಿದ್ದರು.
ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ನವಿನ್ ಪಿ.ಎಸ್. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಧಕೃಷ್ಣ ಅಡ್ಯಂತಾಯ ವಂದಿಸಿದರು.
