ಬಂಟ್ವಾಳ: ಇಲ್ಲಿನ ಪ್ರತಿಷ್ಠಿತ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧ್ಯಕ್ಷರಾಗಿ ಕೆ.ಪದ್ಮನಾಭ ರೈ ಮತ್ತು ಉಪಾಧ್ಯಕ್ಷರಾಗಿ ಚಂದ್ರಶೇಖರ ಪೂಜಾರಿ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ.

bantwal photo news

ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿದರು. ಒಟ್ಟು 13 ಸ್ಥಾನ ಹೊಂದಿರುವ ಎಪಿಎಂಸಿನಲ್ಲಿ ಬಿಜೆಪಿ-7 ಮತ್ತು ಕಾಂಗ್ರೆಸ್-6 ಸದಸ್ಯರನ್ನು ಹೊಂದಿದ್ದು, ಮೂವರು ನಾಮನಿರ್ದೇಶಿತ ಸದಸ್ಯರ ಬಲದಲ್ಲಿ ಕಾಂಗ್ರೆಸ್‍ಗೆ ಮತ್ತೆ ಅಧಿಕಾರ ದೊರೆತಿದೆ.
ಇದಕ್ಕಿಂತ ಮೊದಲು ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ ಅನುಭವ ಹೊಂದಿದ್ದ ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ ಅವರು ಕಳೆದ 20 ತಿಂಗಳ ಆಡಳಿತಾವಧಿಯಲ್ಲಿ ಮೆಲ್ಕಾರ್ ರಾಷ್ಟ್ರೀಯ ಹೆದಾರಿ ಬಳಿ ‘ಎಪಿಎಂಸಿ ಪ್ರಾಂಗಣ’ ನಿರ್ಮಿಸಲು ಒಟ್ಟು 7ಎಕರೆ ಸರ್ಕಾರಿ ಜಮೀನು ಮಂಜೂರುಗೊಳಿಸುವಲ್ಲಿ ಯಶಸ್ವಿಯಾಗಿದ್ದರು.

ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದೇಶ ಶೆಟ್ಟಿ ಮಾಣಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಹಮ್ಮದ್ ನಂದಾವರ ಮತ್ತಿತರ ಕಾಂಗ್ರೆಸ್ ಮುಖಂಡರು ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದನೆ ಸಲ್ಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *