ಬಂಟ್ಟಾಳ: ಅಂತರಾಷ್ಟ್ರೀಯ ವ್ಯಾಪಾರದಲ್ಲಿ ವಿಶ್ವ ವ್ಯಾಪಾರ ಸಂಸ್ಥೆಯ ಪಾತ್ರ ಪ್ರಮುಖವಾಗಿದ್ದು ಕಾನೂನು ಬದ್ದ ಚೌಕಟ್ಟನ್ನು ಒದಗಿಸುವ ಮುಲಕ ಈ ಸಂಸ್ಥೆಯು ಅಂತರಾಷ್ಟ್ರೀಯ ವ್ಯಾಪಾರವನ್ನು ನಿಯಂತ್ರಿಸುತ್ತದೆ ಎಂದು ಮಹಾವೀರ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ| ರಾಧಾಕೃಷ್ಣ ಶೆಟ್ಟಿ ಇವರು ಬಂಟ್ಟಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಸ್ನಾತಕೋತ್ತರ ವಿಭಾಗವು ಆಯೋಜಿಸಿದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಹೇಳಿದರು.DSC_0004
ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ  ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಬೌದ್ದಿಕ ಆಸ್ತಿಯ ಹಕ್ಕುಗಳ ಕುರಿತು ಮಾಹಿತಿ ನೀಡಿದರು. ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಶ್ರೀ ನೆಲ್ಸನ್ ಮರ್ವಿನ್ ಫೆರ್ನಾಂಡಿಸ್ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.

ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿಯರಾದ ವಿದ್ಯಾಸರಸ್ವತಿ ಸ್ವಾಗತಿಸಿ, ಗುಣಶೀಲ ವಂದಿಸಿ, ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *