ಬಂಟ್ವಾಳ:ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಗರಿಷ್ಟ ಪ್ರಮಾಣದಲ್ಲಿ ಮುಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದಕ್ಕೆ ಪರ್ಯಾಯವಾಗಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮೂಲಭೂತ ಸೌಕರ್ಯ ಹಾಗೂ ಮಕ್ಕಳಿಗೆ ಬಾಲ್ಯದಿಂದಲೇ ಸ್ವಾಭಿಮಾನ ಮೂಡಿಸುವ ನೈತಿಕ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದ್ದಾರೆ.8btl-GOSTI
ಇಲ್ಲಿನ ಫರಂಗಿಪೇಟೆ ಸೇವಾಂಜಲಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶುಕ್ರವಾರ ಸಂಜೆ ನಡೆದ ತಾಲ್ಲೂಕು ಮಟ್ಟದ 19ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಥಮ ಗೋಷ್ಠಿಯಲ್ಲಿ ‘ಭಾಷೆ ಮತ್ತು ಸಂಸ್ಕøತಿ’ ಬಗ್ಗೆ ಅವರು ಮಾತನಾಡಿದರು.
ಭಾಷೆ ಮತ್ತು ಸಂಸ್ಕೃತಿ ಎಂಬುದು ಪರಸ್ಪರ ಒಂದಕ್ಕೊಂದು ಪೂರಕವಾಗಿದ್ದು, ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಮೌಲ್ಯ ಸಹಿತ ಶಿಕ್ಷಣ ಸಿಗಬೇಕು. ಆ ಮೂಲಕ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಕಡಿವಾಣ ಹಾಕಿ ಕನ್ನಡ ಮಧ್ಯಮ ಶಾಲೆಗಳಲ್ಲಿ ಶೈಕ್ಷಣಿಕ ಸುಧಾರಣೆ ತರುವ ಮೂಲಕ ಕೇವಲ ಅಂಕ ಗಳಿಕೆ ಮಾತ್ರ ಶಿಕ್ಷಣದ ಮಾನದಂಡ ಎಂಬ ತಪ್ಪು ಅಭಿಪ್ರಾಯ ದೂರಗೊಳಿಸಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಶಾಲೆ ಮುಚ್ಚುವ ಬಗ್ಗೆ ಅಪ ಪ್ರಚಾರಕ್ಕೆ ಬದಲಾಗಿ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕೂಡಾ ಗರಿಷ್ಟ ಸಂಖ್ಯೆಯಲ್ಲಿ ದಾಖಲಾತಿ ಸಾಧ್ಯವಿದೆ ಎಂಬುದು ಇಲ್ಲಿಗೆ ಸಮೀಪದ ವಿಟ್ಲ ಮತ್ತಿತರ ಕಡೆ ಸಾಬೀತಾಗಿದೆ ಎಂದರು.
ಸಮ್ಮೇಳನಾಧ್ಯಕ್ಷ ಪ್ರೊ.ಕೆ.ತುಕಾರಾಮ ಪೂಜಾರಿ, ಪೂರ್ವಾಧ್ಯಕ್ಷ ಡಾ.ಪುಂಡಿಕಾಯಿ ಗಣಪಯ್ಯ ಭಟ್, ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ಸಾಮಾಜಿಕ ಚಿಂತಕ ಕೈಯೂರು ನಾರಾಯಣ ಭಟ್, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಸುಳ್ಯ ಕಸಾಪ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ಬಂಟ್ವಾಳ ಕಸಾಪ ಅಧ್ಯಕ್ಷ ಕೆ.ಮೋಹನ ರಾವ್, ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಕೆ.ಕೃಷ್ಣಕುಮಾರ್ ಪೂಂಜ, ಸಮಿತಿ ಅಧ್ಯಕ್ಷ ಕೆ.ಎನ್.ಗಂಗಾಧರ ಆಳ್ವ ಮತ್ತಿತರರು ಇದ್ದರು.
ಸಾಹಿತಿ ವಿ.ಸು.ಭಟ್ ಸ್ವಾಗತಿಸಿ, ಕಸಾಪ ಪೂರ್ವಾಧ್ಯಕ್ಷ ಜಯಾನಂದ ಪೆರಾಜೆ ವಂದಿಸಿದರು. ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಡಿ.ಬಿ.ಅಬ್ದುಲ್ ರಹಿಮಾನ್ ಸಹಕರಿಸಿದರು.

By suddi9

Leave a Reply

Your email address will not be published. Required fields are marked *