ವಿಟ್ಲ :ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಜನವರಿ 26ರಂದು ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಬಾಲವಿಕಾಸ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ನಾರಾಯಣ ಶೆಟ್ಟಿ ಕೊಂಬಿಲ ಧ್ವಜಾರೋಹಣ ನೆರವೇರಿಸಿದರು.
ಶಾಲಾ ಆಡಳಿತಾಧಿಕಾರಿ ಶ್ರೀ ಸಿ. ಶ್ರೀಧರ್ ಮಾತನಾಡಿ ಪ್ರತಿಫಲಾಪೇಕ್ಷೆಯಿಲ್ಲದೆ ದೇಶಕ್ಕಾಗಿ ದುಡಿಯುವುದು ಪೌರರ ಆದ್ಯ ಕರ್ತವ್ಯವಾಗಿದೆ. ಸಾರ್ವತ್ರಿಕ ಚುನಾವಣೆಯ ಮೂಲಕ ಆಯ್ಕೆಗೊಂಡು ಜನಪ್ರತಿನಿಧಿಗಳು ಪ್ರಜೆಗಳ ಆಸೆ, ಆಶೋತ್ತರಗಳನ್ನು ಪ್ರತಿಬಿಂಬಿಸುತ್ತಾರೆ. ಆದುದರಿಂದ ಚುನಾವಣೆಯಲ್ಲಿ ಸಮರ್ಥ ನಾಯಕರನ್ನು ಆರಿಸುವ ಮೂಲಕ ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಕಾರಣೀಕರ್ತರಾಗೋಣ ಎಂದರು.
ಮುಖ್ಯ ಅತಿಥಿ, ನಿವೃತ್ತ ಪೋಲೀಸ್ ಅಧಿಕಾರಿ ಶ್ರೀ ಕಾಂತಪ್ಪ ಗೌಡ ಕೆದಿಲ ಮಾತನಾಡಿ ಯಾವುದೇ ರೀತಿ ಅಭಿಲಾಷೆ ಪಡದೆ, ನಿಸ್ವಾರ್ಥ ದೇಶದ ಉನ್ನತಿಯಲ್ಲಿ ಭಾಗಿಯಾಗೋಣ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೊಟೇರಿಯನ್ ಪುಷ್ಪರಾಜ್ ಹೆಗ್ಡೆ ಮಾತನಾಡಿ, ಹೆತ್ತವರು ತಮ್ಮ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಅವಿರತ ಶ್ರಮಿಸುತ್ತಾರೆ. ಆದ್ದರಿಂದ ಕಲಿಕೆಯತ್ತ ಗಮನವನ್ನು ಕೇಂದ್ರೀಕರಿಸಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ. ಆ ಮೂಲಕ ಶಾಲೆಗೆ, ಹೆತ್ತವರಿಗೆ ಕೀರ್ತಿ ತನ್ನಿ ಎಂದು ಮಕ್ಕಳಿಗೆ ಕರೆನೀಡಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ. ಶೆಟ್ಟಿ , ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಡೀನಾ ಅನನ್ಯ ಸ್ವಾಗತಿಸಿ, ಮೋಕ್ಷಾ ಎಸ್. ವಂದಿಸಿದರು. ಮೇಘ, ಅಂಕಿತಾ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ಜರುಗಿತು.