ಮೂಡಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಕಾಲೇಜಿನಲ್ಲಿ ವಾರ್ಷಿಕ ಇ0ಗ್ಲೀಷ್ ಸಂವಹನ ಹಾಗೂ ಜೀವನ ಕೌಶಲ ತರಬೇತಿಯ ಕಾರ್ಯಕ್ರಮ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಶ್ರೀ ಧವಲಾ ಕಾಲೇಜಿನ ಪ್ರಾಂಶುಪಾಲ ರವೀಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಇಂಗ್ಲೀಷ್ ಭಾಷೆ ಹಾಗೂ ಜೀವನ ಕೌಶಲ ಪ್ರಸ್ತುತ ಹೆಚ್ಚು ಪ್ರಚಲಿತವಾಗಿದ್ದು ಅದನ್ನು ಕಲಿಯುವ ಅವಕಾಶ ದೊರೆತಾಗ ಅದನ್ನು ತಪ್ಪದೇ ಬಳಸಿಕೊಳ್ಳಬೇಕು ಎಂದರು.

ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆವಹಿಸಿ ಮಾತನಾಡಿ, ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಂಗ್ಲೀಷ್ ತರಬೇತಿಯನ್ನು ನೀಡಲಾಗುತ್ತದೆ ಎಂದರು.
ಮ್ಯಾನುಯೆಲ್ ಡಿ’ಸೋಜ, ಅನೂಪ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ವಿದ್ಯಾರ್ಥಿಗಳ ಪ್ರದರ್ಶನಕ್ಕೆ ತಕ್ಕಂತೆ ಗ್ರೇಡ್ ನೀಡಿ ಪ್ರಮಾಣ ಪತ್ರ ವಿತರಿಸಲಾಯಿತು.
ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕ, ಕಾಲೇಜಿನ ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥ ವಿಮಲ್ ರಾಜ್ ಸ್ವಾಗತಿಸಿದರು. ವರ್ಷಾ ಕಾಮತ್ ವಿದ್ಯಾರ್ಥಿಗಳ ವಿವರ ನೀಡಿದರು. ಸೌರವ್ ವಂದಿಸಿದರು. ವಿಕ್ರಮ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.