ಬಂಟ್ವಾಳ:ಅವಿಭಜಿತ ಜಿಲ್ಲೆಯಲ್ಲಿ ವೈಶಿಷ್ಟ್ಯತೆ ಮತ್ತು ಸಂಪದ್ಭರಿತ ಸಾಹಿತ್ಯ ಹೊಂದಿರುವ ಯಕ್ಷಗಾನ ಕಲೆಯು ಜನರಲ್ಲಿ ಧಾರ್ಮಿಕ ನಂಬಿಕೆಯೊಂದಿಗೆ ಬೆಳೆದು ಬಂದಿದೆ. ಇದರಿಂದಾಗಿ ಕಟೀಲು ಮತ್ತಿತರ ಧಾರ್ಮಿಕ ಕ್ಷೇತ್ರಗಳ ಯಕ್ಷಗಾನ ಮೇಳದಲ್ಲಿ ಅಪಾರ ಮಂದಿ ಕಲಾವಿದರು ಗರಿಷ್ಟ ಅವಧಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.16btl-Bondala

ಇಲ್ಲಿನ ಶಂಭೂರು ಗ್ರಾಮದ ಬೊಂಡಾಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದ ಕಟೀಲು ಮೇಳದ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರರಾದ ನಗ್ರಿ ಮಹಾಬಲ ರೈ ಮತ್ತು ಕುಮಾರ ಪಡ್ರೆ ಇವರಿಗೆ ಬೊಂಡಾಲ ಪ್ರಶಸ್ತಿ ಪ್ರದಾನ ನೆರವೇರಿಸಿದ ಬಳಿಕ ಅವರು ಮಾತನಾಡಿದರು.

ಇಲ್ಲಿನ ಕಲಾಸಕ್ತರಾದ ದಿವಂಗತ ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ದಿವಂಗತ ಬೊಂಡಾಲ ರಾಮಣ್ಣ ಶೆಟ್ಟಿ ಸ್ಮರಣಾರ್ಥ ಬೊಂಡಾಲ ಚಾರಿಟೇಬಲ್ ಟ್ರಸ್ಟಿನ ವತಿಯಿಂದ ಕಳೆದ ಹಲವು ವರ್ಷಗಳಿಂದ ಪ್ರಶಸ್ತಿ ಪ್ರದಾನ ಕಾರ್ಯ ನಡೆಯುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಅನಂತಪದ್ಮನಾಭ ಅಸ್ರಣ್ಣ ಆಶೀರ್ವಚನ ನೀಡಿ, ಕಟೀಲು ದೇವಿಗೆ ಯಕ್ಷಗಾನ ಸೇವೆ ನೀಡುವುದರ ಜೊತೆಗೆ ಕಲಾ ಸೇವೆಯಲ್ಲಿ ತೊಡಗಿರುವ ಹಿರಿಯ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದರು.ಪ್ರಗತಿಪರ ಕೃಷಿಕ ಶ್ರೀನಿವಾಸ ಪೂಜಾರಿ ರಾಯಸ ಮತ್ತಿತರರು ಇದ್ದರು.

ಟ್ರಸ್ಟಿನ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಟ್ರಸ್ಟಿ ಸೀತಾರಾಮ ಶೆಟ್ಟಿ ವಂದಿಸಿದರು. ವಿಶ್ವನಾಥ ಶೆಟ್ಟಿ ಸನ್ಮಾನಿತರನ್ನು ಪರಿಚಯಿಸಿದರು. ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *