ಬಂಟ್ವಾಳ: ಸಜಿಪಪಡು ಗ್ರಾಮದ ಕಂಚಿಲ ಎಂಬಲ್ಲಿ ಕಾರು ಮತ್ತು ರಿಕ್ಷಾ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪ್ರಯಾಣಿಕರಿಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತರನ್ನು ಮಂಚಿ ನಿವಾಸಿಗಳಾದ ಜೈನಾಬು (45) ಮತ್ತು ಇವರ ಸಹೋದರಿ ಜೋಹರಾ (55) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಆಶ್ರಫ್ ಮತ್ತು ಕಾರು ಚಾಲಕ ಮುಹಮ್ಮದ್ ಸಿರಾಜ್ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಚಿ ನಿವಾಸಿ ಜೋಹರಾ ಅಸೌಖ್ಯದ ಹಿನ್ನೆಲೆಯಲ್ಲಿ ತನ್ನ ಸಹೋದರಿ ಜೈನಾಬು ಜೊತೆಗೆ ಸ್ಥಳೀಯ ನಿವಾಸಿ ಆಶ್ರಫ್ ಎಂಬವರ ಆಟೊ ರಿಕ್ಷಾದಲ್ಲಿ ಸೋಮವಾರ ಸಂಜೆ ಮಂಚಿಯಿಂದ ಚೇಳೂರು ಕಡೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

8btl-Rikshwa

ಸಜಿಪಪಡು ಗ್ರಾಮದ ಕಂಚಿಲ ಎಂಬಲ್ಲಿ ಇನ್ನೊಂದು ವಾಹನ ಹಿಂದಿಕ್ಕುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರಿನಿಂದ ಬರುತ್ತಿದ್ದ ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯರಿಬ್ಬರನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುತ್ತಿದ್ದಂತೆಯೇ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡ ಚಾಲಕರಿಬ್ಬರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಿಂದ ಆಟೊ ರಿಕ್ಷಾ ರಸ್ತೆ ಬದಿ ಪೊದೆಗೆ ಉರುಳಿ ಬಿದ್ದು ನುಜ್ಜುಗುಜ್ಜಾಗಿದ್ದು, ಕಾರಿನ ಎದುರು ಭಾಗ ಹಾನಿಗೀಡಾಗಿದೆ ಎಂದು ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಸಂಚಾರಿ ಠಾಣೆ ಎಸೈ ಮಂಜುನಾಥ್, ಎಎಸೈ ಎಂ.ಕೆ.ಕುಟ್ಟಿ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *