ಬಂಟ್ವಾಳ: ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇದೇ ಎ. 9ರಂದು ಬೆಳಿಗ್ಗೆ ವಾಮಂಜೂರು ಅನಂತ ಪದ್ಮನಾಭ ಉಪಾಧ್ಯಾಯ ಇವರ ಮಾರ್ಗದರ್ಶನದಲ್ಲಿ ವಾರ್ಷಿಕ ಉತ್ಸವ ನಡೆಯಲಿದೆ. ಅಂದು ಮಧ್ಯಾಹ್ನ ದೇವರಿಗೆ ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6 ಗಂಟೆಗೆ ಭಜನೆ, ರಾತ್ರಿ 7ಗಂಟೆಗೆ ರಂಗಪೂಜೆ ಮತ್ತು 8ಗಂಟೆಗೆ ದೇವರ ಬಲಿ ಪೂಜೆ ನಡೆಯಲಿದೆ ಎಂದು ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಎಂ.ಪದ್ಮರಾಜ ಬಲ್ಲಾಳ್ ಮಾವಂತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.