ಸುದ್ದಿ9 ಬಂಟ್ವಾಳ : ಶ್ರೀ ಕ್ಷೇ.ಧ.ಗ್ರಾ.ಯೋ.ಬಂಟ್ವಾಳ ವಲಯ ಹಾಗೂ ಬಂಟ್ವಾಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಮಾರ್ಗದರ್ಶನದಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮ ಸರಪಾಡಿ ಗ್ರಾ.ಪಂ.ವ್ಯಾಪ್ತಿಯ ಮಾವಿನಕಟ್ಟೆ ದ.ಕ.ಹಿ.ಪ್ರಾ.ಶಾಲಾ ವಠಾರದಲ್ಲಿ ಜರಗಿತು.
ಶ್ರೀ ಕ್ಷೇ.ಧ.ಗ್ರಾ.ಯೋ ಬಂಟ್ವಾಳ ಯೋಜನಾಕಾರಿ ಕು|ಸುನೀತಾ ನಾಯಕ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಹಿಳೆಯರು ದುಶ್ಚಟಗಳ ವಿರುದ್ಧ ಜಾಗೃತರಾಗಬೇಕು. ಮಕ್ಕಳು ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದ ಅವರು ಯೋಜನೆಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಸದಸ್ಯರ ಜವಾಬ್ದಾರಿಯ ಬಗ್ಗೆ ಅರಿವು ಮೂಡಿಸಿದರು. ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ವಾಸು ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆ ಸದಸ್ಯ ವಿನಯ ನಾಯಕ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರ ದೂರದರ್ಶತ್ವದಿಂದ ಮಹಿಳಾ ಜನಜಾಗೃತಿ ವೇದಿಕೆ 27 ಜಿಲ್ಲೆಗೆ ವಿಸ್ತರಣೆಗೊಂಡಿದ್ದು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಮಹಿಳಾ ಜಾಗೃತಿಗೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೇಂದ್ರ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ವಲಯ ಒಕ್ಕೂಟದ ಅಧ್ಯಕ್ಷ ಜಯಕರ ಆಚಾರ್ಯ, ಗ್ರಾ.ಪಂ.ಸದಸ್ಯರಾದ ಪುರುಷೋತ್ತಮ ಪೂಜಾರಿ, ವಾಣಿಗಣೇಶ್, ಗೀತಾ, ಒಕ್ಕೂಟ ಪದಾಕಾರಿಗಳು, ಯೋಜನೆಯ ಸದಸ್ಯರು ಉಪಸ್ಥಿತರಿದ್ದರು.
ಒಕ್ಕೂಟ ಅಧ್ಯಕ್ಷ ಹರಿಯಪ್ಪ ಸ್ವಾಗತಿಸಿದರು. ಮೇಲ್ವಿಚಾರಕ ವಸಂತ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

 

12-1

 

By suddi9

Leave a Reply

Your email address will not be published. Required fields are marked *