ಬಂಟ್ವಾಳ: ಪಡಿ ಸಂಸ್ಥೆ ಮಂಗಳೂರು, ಶಿಕ್ಷಣ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಕಾವಳಮೂಡೂರು ಗ್ರಾಮ ಪಂಚಾಯತು ಆಶ್ರಯದಲ್ಲಿ ಗ್ರಾಮ ಪಂಚಾಯತು ಸದಸ್ಯರು ಮತ್ತು ಮಕ್ಕಳ ರಕ್ಷಣಾ ಸಮಿತಿ ಸದಸ್ಯರಿಗೆ ” ಮಗು ಸ್ನೇಹಿ ಗ್ರಾಮ ಪಂಚಾಯತು ಮತ್ತು ಮಕ್ಕಳ ರಕ್ಷಣಾ ಸಮಿತಿ ಕರ್ತವ್ಯಗಳು” ವಿಷಯದ ಕುರಿತು ತರಬೇತಿ ಕಾರ್ಯಾಗಾರ ಶುಕ್ರವಾರ ಕಾವಳಮೂಡೂರು ಗ್ರಾಮ ಪಂಚಾಯತು ಸಭಾಂಗಣದಲ್ಲಿ ನಡೆಯಿತು.
ಜಿ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಲಹೆ ನೀಡಿದರು.
ಪಂಚಾಯತು ಅಧ್ಯಕ್ಷ ಸಂತೋಷ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಲೈಫ್ ಸ್ಕಿಲ್ ಟ್ರೈನಿಂಗ್ ಸೆಂಟರ್ ನಿರ್ದೇಶಕ ಗೋಪಾಲ ಅಂಚನ್ ತರಬೇತಿ ಕಾರ್ಯಾಗಾರ ನಡೆಸಿದರು. ಪಡಿ ಸಂಯೋಜಕಿ ರಾಜೇಶ್ವರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪಂಚಾಯತು ಅಭಿವೃದ್ಧಿ ಅಧಿಕಾರಿ ವೇದವ ಸ್ವಾಗತಿಸಿದರು.
