ಬಂಟ್ವಾಳ:ತಾಲ್ಲೂಕಿನ ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ನೇತೃತ್ವದಲ್ಲಿ ಅ.3ರಿಂದ 4ರತನಕ ಕೊಯಿಲ ಶ್ರೀ ಮಹಾಗಣಪತಿ ದೇವಸ್ಥಾನ ಬಳಿ ನಡೆಯಲಿರುವ ‘ಸಾರ್ವಜನಿಕ ಶ್ರೀ ಶಾರದೋತ್ಸವ’ ಸಮಿತಿ ಅಧ್ಯಕ್ಷರಾಗಿ
ಸ್ಥಳೀಯ ತಾಲ್ಲೂಕು ಪಂಚಾಯಿತಿ ಸದಸ್ಯ ವಸಂತ ಕುಮಾರ್ ಅಣ್ಣಳಿಕೆ ಇವರು ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಮತ್ತು ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯಾಗಿ ರಂಜನ್ ಕುಮಾರ್ ಅರಳ, ಕೋಶಾಧಿಕಾರಿಯಾಗಿ ಶರತ್ ಕುಮಾರ್ ಕೊಯಿಲ, ಸಂಘಟನಾ ಕಾರ್ಯದರ್ಶಿಗಳಾಗಿ ಸಂತೋಷ್ ಕುಮಾರ್ ಚೌಟ ಕೊಯಿಲ, ರಶ್ಮಿತ್ ಶೆಟ್ಟಿ ಕೈತ್ರೋಡಿ, ಸಂತೋಷ್ ಬಂಗೇರ ಶಾಂತಿಪಲ್ಕೆ ಆಯ್ಕೆಯಾಗಿದ್ದಾರೆ.
ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ನ ಅಧ್ಯಕ್ಷರಾಗಿ ದುರ್ಗಾದಾಸ್ ಶೆಟ್ಟಿ ಮಾವಂತೂರು, ಪ್ರಧಾನ ಕಾರ್ಯದರ್ಶಿಯಾಗಿ ಡೊಂಬಯ ಬಿ.ಅರಳ, ಕೋಶಾಧಿಕಾರಿಯಾಗಿ ಹರೀಶ್ ಪೂಜಾರಿ ಬಾಡಬೆಟ್ಟು, ಉಪಾಧ್ಯಕ್ಷರಾಗಿ ವಿಶ್ವನಾಥ ಗೌಡ ರಾಯಿ, ಪ್ರಸನ್ನಕುಮಾರ್ ಶೆಟ್ಟಿ ಅರಳ, ಪ್ರಶಾಂತ್ ಕುಮಾರ್ ಶೆಟ್ಟಿ ಕೊಯಿಲ, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ರಾಯಿ ಬೆಟ್ಟು , ದಿನೇಶ್ ಸುವರ್ಣ, ಸಂತೋಷ್ ಅಂಚನ್ ಕೊಯಿಲ, ಜೊತೆ ಕಾರ್ಯದರ್ಶಿಯಾಗಿ ಉಮೇಶ ಹೋರಂಗಳ ಮತ್ತು ರಾಜೇಶ ಜೈನ್ ಪಡ್ರಾಯಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.