ಬಂಟ್ವಾಳ:ಬಿಜೆಪಿಯ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಬಂಟ್ವಾಳ ಬಿಜೆಪಿ ವತಿಯಿಂದ ಬುಧವಾರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.ಸುಷ್ಮಾ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

FB_IMG_1565161614816ಈ ಸಂದರ್ಭ ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ ನುಡಿ ನಮನ ಸಲ್ಲಿಸಿದ್ದರು.ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಪಕ್ಷದ ಹಿರಿಯ ನಾಯಕಿ ಸುಷ್ಮಾಜೀಯವರ ಅಗಲಿಕೆ ಭಾರತಕ್ಕೆ ತುಂಬಲಾರದ ನಷ್ಟವಾಗಿದೆ.ಅತ್ಯತ್ತಮ ಸಂಸದೀಯ ಪಟುವಾಗಿದ್ದ ಸುಷ್ಮಾ ಸ್ವರಾಜ್ ಅವರು ಪಕ್ಷದಲ್ಲು ಮೆಚ್ಚುಗೆ ,ಗೌರವವನ್ನು ಪಡೆದಿದ್ದರು. ಪಕ್ಷದ ಬೆಳವಣಿಗೆಯಲ್ಲು ಅವರ ಕೊಡುಗೆ ಅಪಾರವಾದದ್ದು ಎಂದು ಹೇಳಿದರು.     ಕ್ಷೇತ್ರ  ಸಮಿತಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು. ಕ್ಷೇತ್ರ ಉಪಾಧ್ಯಕ್ಷರಾದ ದೇವಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *