ಬಂಟ್ವಾಳ : ವಾಮದಪದವು ಬಾರೆಕ್ಕಿನಡೆಯಲ್ಲಿ ಇತ್ತೀಚೆಗೆ ವಿದ್ಯುತ್ ದುರಂತಕ್ಕೆ ತಂದೆ, ಮಗಳು ಬಲಿಯಾದ ಘಟನೆಯ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ ಚೆಕ್ ನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮೆಸ್ಕಾಂ ನ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಗಳಾದ ನಾರಾಯಣ ಭಟ್,ಪ್ರಶಾಂತ್ ಪೈ ಉಪಸ್ಥಿತರಿದ್ದರು.
