ಬಂಟ್ವಾಳ: ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಹಾಗೂ ಮೋರ್ಚಾದ ಪದಾಧಿಕಾರಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಮಂಗಳವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ಕ್ಷೇತ್ರ ಸಮಿತಿಯ ಉಪಾಧ್ಯಕ್ಷ ದೇವಪ್ಪ ಪೂಜಾರಿ, ಕಾರ್ಯದರ್ಶಿಗಳಾದ ಪ್ರಕಾಶ್ ಅಂಚನ್, ರಂಜಿತ್ ಮೈರ, ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ರಾಯಿಬೆಟ್ಟು, ಸುರೇಶ್ ಕೋಟ್ಯಾನ್, ಪ್ರಮುಖರಾದ ಪ್ರದೀಪ್ ಅಜ್ಜಿಬೆಟ್ಟು, ಕಾರ್ತಿಕ್ ಬಲ್ಲಾಳ್, ಪುಷ್ಪರಾಜ್ ಅಲೆತ್ತೂರು ಮೊದಲಾದವರು ಹಾಜರಿದ್ದರು.