ಕೋಲಾರ  : ಸರ್ಕಾರಿ ನೌಕರರು ಪ್ರತಿನಿತ್ಯ ತನ್ನದೇ ಆದ ಸಮಸ್ಯೆಗಳ ನಡುವೆ ಸರ್ಕಾರಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಇಂತಹ ನೌಕರರ ಸಂಕಷ್ಟಗಳಿಗೆ ನೆರವಾಗಲು ಸರ್ಕಾರಿ ನೌಕರರು ಸಂಘಟಿತರಾಗಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಆರ್.ಅನಿಲ್ ಕುಮಾರ್ ತಿಳಿಸಿದರು .ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿಂದು ಜಿಲ್ಲಾಧ್ಯಕ್ಷ ಕೆ.ಬಿ. ಅಶೋಕ್ ತಮ್ಮನ್ನು ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ನಂತರ ಸಭೆಯನ್ನು ಕುರಿತು ಅವರು ಮಾತನಾಡುತ್ತಿದ್ದರು.

Govt employes associaiton1
ವಿವಿಧ ಇಲಾಖೆಗಳಲ್ಲಿ ತನ್ನದೇ ಆದ ಸಮಸ್ಯೆಗಳಲ್ಲಿ ಆಯಾ ನೌಕರರಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕವಾಗಿ ಶ್ರಮಿಸುವ ಅಗತ್ಯ ಇದೆ ಇದಕ್ಕೆ ಎಲ್ಲ ನೌಕರರ ಪ್ರತಿನಿಧಿಗಳು ಸ್ಪಂದಿಸಬೇಕು ಎಂದರು .ನೇಮಕಾತಿ ಪತ್ರ ನೀಡಿ ಅಭಿನಂದಿಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಬಿ. ಅಶೋಕ್ ನೌಕರರ ಸಂಘಟನೆಗೆ ತನ್ನದೆ ಆದ ಇತಿಹಾಸ ಇದ್ದು, ಅದನ್ನು ಮತ್ತಷ್ಟು ಬಲಿಷ್ಠವಾಗೊಳಿಸಿ ಸಂಘಟನೆ ಬೆಳೆಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ವಿ.ಜಗನ್ನಾಥ್, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್, ನ್ಯಾಯಾಂಗ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ನಾಗರಾಜ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಂದೀಶ್, ಮಂಜುನಾಥ್, ಶ್ರೀರಾಮ್, ಶ್ರೀನಿವಾಸರೆಡ್ಡಿ, ತಾಲ್ಲೂಕು ಶಿಕ್ಷಕ ಸಂಘದ ಕಾರ್ಯದರ್ಶಿ ಸಿ.ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *