ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವಿವಿಧೆಡೆ ಪ್ರವಾಹ ಮತ್ತು ಅತಿಯಾದ ಮಳೆಯಿಂದ ನೂರಾರು ಎಕರೆ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿ ಉಂಟಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಘೋಷಿಸಿದ ‘ಫಸಲ್ ಬಿಮಾ’ ಯೋಜನೆ ಬಗ್ಗೆ ಸೌಲಭ್ಯ ಪಡೆಯಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸದಸ್ಯರು ಆರೋಪಿಸಿದರು.ಇಲ್ಲಿನ ಬಿ.ಸಿ.ರೋಡು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರಾ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಮಲ್ಲಿಕಾ ವಿ.ಶೆಟ್ಟಿ ಅವರು ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಸದಸ್ಯರಾದ ರಾಜೇಶ ಬಾಳೆಕಲ್ಲು, ಉಸ್ಮಾನ್ ಕರೋಪಾಡಿ, ಪ್ರಭಾಕರ ಪ್ರಭು, ಯಶವಂತ ಪೊಳಲಿ ಮತ್ತಿತರರು ಧ್ವನಿಗೂಡಿಸಿದರು.29btl-Taluk

ಆರಂಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ಬಳಿ ಹೋದರೆ ಕೃಷಿ ಇಲಾಖೆ ಕಚೇರಿ ತೋರಿಸುತ್ತಾರೆ. ಅಲ್ಲಿಗೆ ಹೋದರೆ ತೋಟಗಾರಿಕಾ ಇಲಾಖೆ ಎನ್ನುತ್ತಾರೆ. ಅಲ್ಲಿ ಹೋದಾಗ ಸಹಕಾರಿ ಇಲಾಖೆ ಅಧಿಕಾರಿ ಕಡೆಗೆ ಹೋಗಲು ಸೂಚಿಸುತ್ತಾರೆ. ಇದರಿಂದಾಗಿ ಕೃಷಿಕರಲ್ಲಿ ಭಾರೀ ಗೊಂದಲಕ್ಕೆ ಕಾರಣವಾಗಿದ್ದು, ‘ದೇವರು ಕೊಟ್ಟರೂ ಪೂಜಾರಿ ಬಿಡ’ ಎಂ¨ಂತಾಗಿದೆ ಎಂದು ಸದಸ್ಯರು ಅಳಲು ತೋಡಿಕೊಂಡರು. ಇದಕ್ಕೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಪ್ರತಿಕ್ರಿಯಿಸಿ, ಹವಾಮಾನ ಆಧಾರಿತ ವಿಮೆ ಬಗ್ಗೆ ‘ಆನ್‍ಲೈನ್ ಮತ್ತು ಆಫ್‍ಲೈನ್’ ಎಂದು ಹೇಳಿ ಕೃಷಿಕರಲ್ಲಿ ಗೊಂದಲ ಮೂಡಿಸುವ ಬದಲಾಗಿ ಅಧಿಕಾರಿಗಳು ಸಮನ್ವಯತೆ ಮೂಲಕ ಜನತೆಗೆ ಸ್ಪಷ್ಟ ಮಾಹಿತಿ ನೀಡಿ ಎಂದು ತಿಳಿಸಿದರು.

ಇದೇ ವೇಳೆ ತಾಲ್ಲೂಕಿನಲ್ಲಿ ಒಟ್ಟು 82 ಡೆಂಗೆ ಪ್ರಕರಣ ದಾಖಲಾಗಿದೆ ಎಂದು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು ತಿಳಿಸಿದರು. ಅತಿವೃಷ್ಟಿ ಮತ್ತು ಪ್ರವಾಹದಿಂದ ಒಟ್ಟು 507 ಮನೆಗಳಿಗೆ ಹಾನಿ ಉಂಟಾಗಿದ್ದು, ಈ ಪೈಕಿ 9 ಮನೆ ಸಂಪೂರ್ಣ ಹಾನಿಗೀಡಾಗಿದೆ ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದರು.ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸಹಿತ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

By suddi9

Leave a Reply

Your email address will not be published. Required fields are marked *