ಬಂಟ್ವಾಳ : ಪ್ರಭಾವ ವಿಜ್ಞಾನ ಸಂಘ, ಐಕ್ಯುಎಸಿ ಹಾಗೂ ಅಟಲ್ ಟಿಂಕರಿಂಗ್ ಲ್ಯಾಬ್ ಇದರ ಸಹಯೋಗದೊಂದಿಗೆ ಪುತ್ತೂರು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ಹಾಗೂ ಯುವ ವಿಜ್ಞಾನಿ ಸ್ವಸ್ತಿಕ್ ಪದ್ಮ ಇವರೊಂದಿಗೆ ವಿದ್ಯಾರ್ಥಿ ಸಂವಾದ ಕಾರ್ಯಕ್ರಮವನ್ನು ಕಲ್ಲಡ್ಕ ಶ್ರೀ ರಾಮ ಮಹಾವಿದ್ಯಾಲಯದಲ್ಲಿ ನಡೆಯಿತು .

ಸ್ವಸ್ತಿಕ್ ಪದ್ಮ ಅವರು ವಿದ್ಯಾರ್ಥಿಗಳೊಂದಿಗೆ ತಮ್ಮ ಸಾಧನೆಯ ಯಶೋಗಾಥೆಯನ್ನು ಹಂಚಿಕೊಳ್ಳುತ್ತಾ, ತಮ್ಮ ಅನ್ವೇಷಣೆಗಳ ವಿವರದೊಂದಿಗೆ ಸ್ಥಳೀಯ ಸಮಸ್ಯೆಗಳು ಹಾಗೂ ಅದಕ್ಕೆ ಬೇಕಾದ ತಂತ್ರಜ್ಞಾನದ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಂತರ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಶೆಕೋಡಿ ಸೂರ್ಯನಾರಾಯಣ ಭಟ್ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ವಸಂತ ಮಾಧವ, ಸಹ ಸಂಚಾಲಕರಾದ ರಮೇಶ್, ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್ಕಟ್ಟೆ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಭೌತಶಾಸ್ತ್ರ ಉಪನ್ಯಾಸಕ ಅಭಿಷೇಕ್ ಸ್ವಾಗತಿಸಿ, ವಿದ್ಯಾರ್ಥಿ ಗಳಾದ ಕಾವ್ಯ ವಂದಿಸಿದರು. ಸವಿತಾ ಕಾರ್ಯಕ್ರಮ ನಿರೂಪಿಸಿದರು.