ಪೊಳಲಿ: ಪ್ರಕೃತಿ ವಿಕೋಪಕ್ಕೆ ತುತ್ತಾದ ನೆರೆ ಸಂತ್ರಸ್ತರ ನೆರವಿಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವತಿಯಿಂದ ರೂ 2 ಲಕ್ಷದ ಚೆಕ್ ನ್ನು ಹಾಗೂ ಬಂಟ್ವಾಳ ಕ್ಷೇತ್ರದ ವಿವಿಧ ಸಂಘ ಸಂಸ್ಥೆಗಳು ನೀಡಿದ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರಿಗೆ ಬೆಂಗಳೂರಿನ ಮಖ್ಯಮಂತ್ರಿ ಗೃಹ ಕಚೇರಿ ಧವಳಗಿರಿಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ,ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿಯವರು ಉಪಸ್ಥಿತರಿದ್ದರು.
