ಕೈಕಂಬ: ಮಂಗಳೂರು ತಾಲೂಕಿನ ಗುರುಪುರ ಗ್ರಾಮದ ಬಡಕರೆಯ ನಿವಾಸಿ ವಾಮಯ್ಯ ಪೂಜಾರಿ ಕುಲವೂರು(73) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ರಾತ್ರಿ ನಿಧನ ಹೊಂದಿದ್ದು, ಸೋಮವಾರ ಅಂತ್ಯ ಸಂಸ್ಕಾರ ನಡೆಯಿತು. ಕಳೆದ ಭಾನುವಾರ ಇವರ ಪತ್ನಿ ಜಯಂತಿ ನಿಧನ ಹೊಂದಿದ್ದರು.
ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು, ಇಬ್ಬರು ಸಹೋದರ, ಇಬ್ಬರು ಸಹೋದರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.