ವಿಟ್ಲ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ ವಿಟ್ಲ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಿಟ್ಲ ಹಾಗೂ ಲಯನ್ಸ್ ಕ್ಲಬ್ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ವಿಟ್ಲದ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶಾಲಾ ಪ್ರಾಂಶುಪಾಲ ಜಯರಾಮ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು.
ಸಂಪ್ನೂಲ ವ್ಯಕ್ತಯಾಗಿ ಮಂಗಳೂರು ನಿವೃತ್ತ ಮಲೇರಿಯಾ ಪರಿವೀಕ್ಷಕ ಜಯರಾಮ ಪೂಜಾರಿ ಭಾಗವಹಿಸಿ ಮಾಹಿತಿ ನೀಡಿದರು. ಶಾಲಾ ಆಡಳಿತಾಧಿಕಾಕಿ ರಾಧಾಕೃಷ್ಣ, ಮಾಜಿ ಆಡಳಿತಾಧಿಕಾರಿ ಮೋನಪ್ಪ ಶೆಟ್ಟಿ, ಲಯನ್ಸ್ ಕ್ಲಬ್ ಕಾರ್ರದರ್ಶಿ ಮನೋಜ್ ರೈ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಸರಿತಾ ಸ್ವಾಗತಿಸಿದರು. ಬಂಟ್ವಾಳ ತಾಲೂಕು ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಸ್ತಾವಿಸಿದರು. ವಲಯ ಮೇಲ್ವಿಚಾರಕ ರಮೇಶ್ ನಿರೂಪಿಸಿದರು. ಶಿಕ್ಷಕಿ ಸವಿತಾ ವಂದಿಸಿದರು.