ಬಂಟ್ವಾಳರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ 150 ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಲ್ನಡಿಗೆ ಜಾಥಾ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.

26bhcongress

ಸಮವಸ್ತ್ರ ಧರಿಸಿ, ಮಧ್ಯಾಹ್ನ 2 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿ ಜಮಾವಣೆಗೊಂಡು ಅಲ್ಲಿಂದ ಜಾಥಾ ಮನಪಾ, ಪಿವಿಎಸ್ ವೃತ್ತ, ಬಂಟ್ಸ್ ಹಾಸ್ಟೆಲ್, ಜ್ಯೋತಿ ವೃತ್ತದಿಂದ ಹಂಪನ್‌ಕಟ್ಟೆಯಾಗಿ ಪುರಭವನದ ಹೊರಾಂಗಣದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ರೈ ಮಾಹಿತಿ ನೀಡಿದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಥವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು.

ಈ ಸಂದರ್ಭ ಡಿಸಿಸಿ ಅಧ್ಯಕ್ಷ, ವಿಧಾನಪರಿಷತ್ತು ಸದಸ್ಯ ಹರೀಶ್ ಕುಮಾರ್, ಮುಖಂಡರಾದ ವೆಂಕಪ್ಪ ಗೌಡ ಸುಳ್ಯ, ಪೃಥ್ವಿರಾಜ್ ಗುರುಪುರ, ರಮಾನಾಥ ವಿಟ, ಜಿಲ್ಲಾ ಪಂಚಾಯತ್ ಸದ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಮ್.ಎಸ್ ಮಹಮ್ಮದ್, ಮಂಜುಳ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ, ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಎ.ಪಿ.ಎಮ್.ಸಿ ಅಧ್ಯಕ್ಷ ಕೆ. ಪದ್ಮನಾಭ ರೈ, ಇದಿನಬ್ಬ ಕಲ್ಲಡ್ಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ಮಲ್ಲಿಕಾ ವಿ ಶೆಟ್ಟಿ ತಾಲೂಕು ಪಂಚಾಯತ್ ಸದಸ್ಯರು, ಪುರಸಭಾ ಸದಸ್ಯರು, ವಲಯ ಅಧ್ಯಕ್ಷರು ಬೂತ್ ಸಮಿತಿ ಅಧ್ಯಕ್ಷರು, ಮುಂಚೂಣಿ ಘಟಕದ ಅಧ್ಯಕ್ಷರುಗಳು, ಯುವ ಕಾಂಗ್ರೆಸ್ ಎನ್.ಎಸ್.ಯು.ಐ ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಥವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು.

 

By suddi9

Leave a Reply

Your email address will not be published. Required fields are marked *