ಬಂಟ್ವಾಳ : ಮತದಾರರ ಪಟ್ಟಿಯ ಪರಿಷ್ಕರಣೆಯ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತೆ ಹಾಗೂ ಪರಿಷ್ಕರಣೆಗೆ ಸಮಯಾವಕಾಶವನ್ನು ಹೆಚ್ಚಿಸುವಂತೆ ಒತ್ತಾಯಿಸಿ ಎಸ್ಡಿಪಿಐ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್ಡಿಪಿಐ ಕ್ಷೇತ್ರಾಧ್ಯಕ್ಷ ಯೂಸುಫ್ ಆಲಡ್ಕ, ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್., ಎಸ್ಡಿಪಿಐ ಬಂಟ್ವಾಳ ಸಮಿತಿ ಸದಸ್ಯರಾದ ಫೈಝಲ್ ಮಂಚಿ, ಸಲೀಂ ಆಲಾಡಿ, ಎಸ್ಡಿಪಿಐ ಪುರಸಭಾ ಸಮಿತಿ ಕಾರ್ಯದರ್ಶಿ ಬಶೀರ್ ಪಲ್ಲ, ತುಂಬೆ ಗ್ರಾಪಂ ಸದಸ್ಯ ಝಹೂರ್ ತುಂಬೆ ಹಾಜರಿದ್ದರು.