ಬಂಟ್ವಾಳ:    ದೇವಸ್ಥಾನದ ಅಭಿವೃದ್ಧಿಯಾಗಬೇಕಾದರೆ ಅಲ್ಲಿ ಜನರ ಒಗ್ಗಟ್ಟಿರಬೇಕಾದದ್ದು ಮುಖ್ಯ. ಕರ್ನಾಟಕ ಬ್ಯಾಂಕ್ ಊರಿನ ದೇವಸ್ಥಾನದ ಅಭಿವೃದ್ಧಿಗೆ ಸದಾ ಬೆಂಬಲ ನೀಡುತ್ತದೆ    ಕರ್ನಾಟಕ ಬ್ಯಾಂಕ್ ಆಡಳಿತ ನಿರ್ದೇಶಕ ಎಂ.ಎಸ್.ಮಹಾಬಲೇಶ್ವರ ಎಂದು ಹೇಳಿದರು. ಭಾನುವಾರ ಪಾಣೆಮಂಗಳೂರು ಸಮೀಪದ  ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ ನೇತ್ರಧಾರಾ ಸಭಾಂಗಣದಲ್ಲಿ ಭಾನುವಾರ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಂದಾದೀಪ ಕಲ್ಯಾಣ ಮಂಟಪದಲ್ಲಿ ನಡೆದ ಧಾರ್ಮಿಕ ಸಭೆ, ಮಾಗಣೆಯ ಸಾಧಕರ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು,

DSC_4551
ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ದೀಪಪ್ರಜ್ವಲನ ಮಾಡುವ ಮೂಲಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊಗರ್ನಾಡು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ವೇ.ಮೂ. ಜನಾರ್ದನ ಭಟ್ ಧಾರ್ಮಿಕ ಉಪನ್ಯಾಸ ನೀಡಿದರು. ಅತಿಥಿಗಳಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಜಯಾನಂದ, ವರ್ಮುಡಿ ಆಲಂಗಾರಿನ ಪದ್ಮಿನಿ ರಾಮ ಭಟ್ ಉಪಸ್ಥಿತರಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀ ಕ್ಷೇತ್ರ ನಂದಾವರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ವಿವರ ನೀಡಿದರು. ಇದೇ ವೇಳೆ ನಾನಾ ಕ್ಷೇತ್ರಗಳ ಸಾಧಕರಾದ ಶಾರದಾ ಎಸ್. ರಾವ್ ಬೊಕ್ಕಸ, ಗಂಗಯ್ಯ ಪೂಜಾರಿ ಕರ್ಮಾರು, ಸಂಜೀವ ಬಂಗೇರ ಕಾಂತುಕೋಡಿ, ಸೇಸಪ್ಪ ಮೂಲ್ಯ ತಲೆಮೊಗರು ಅವರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ನಿಧನರಾದ ಸಾಧಕ ಸುಂದರ ಶೆಟ್ಟಿ ಕಂಪದಕೋಡಿ ಅವರ ಪುತ್ರ ಗೌರವ ಸ್ವೀಕರಿಸಿದರು.  ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *