ಮಂಗಳೂರು: ಸ್ಥಾಪಕರ ದಿನಾಚರಣೆಯ ಹಿನ್ನೆಲೆಯಲ್ಲಿ ಬೆಂಜನಪದವು ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ.ಕ ಜಿಲ್ಲಾ ರೆಡ್‍ಕ್ರಾಸ್ ಘಟಕದ ಸಹಯೋಗದಲ್ಲಿ ವಿದ್ಯಾರ್ಥಿಗಳಿಂದ ರಕ್ತದಾನ ಶಿಬಿರ ನಡೆಯಿತು. ಕಾಲೇಜಿನ ಪ್ರಾಚಾರ್ಯ ಡಾ.ಗಣೇಶ್ ವಿ.ಭಟ್ ರೆಡ್ ಕ್ರಾಸ್ ಜಿಲ್ಲಾ ಘಟಕದ ಪ್ರವೀಣ್ ಕುಮಾರ್, ಕಾಲೇಜಿನ ಘಟಕದ ಅನಂತ ಕೃಷ್ಣ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.