ಬಂಟ್ವಾಳ: ಆಧಾರ್ ಕೇಂದ್ರ ಗಳನ್ನು ಗ್ರಾಮ ಮಟ್ಟದಲ್ಲಿ ತೆರೆಯ ಬೇಕು ಹಾಗೂ ಆಧಾರ್ ಕಾರ್ಡ್ ನಲ್ಲಿ ತಿದ್ದುಪಡಿ ಗಳನ್ನು ಸರಳೀಕರಿಸಲು ಆಗ್ರಹಿಸಿ ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಉಪ ತಹಸೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್, ಕಾರ್ಯದರ್ಶಿ ತುಳಸೀದಾಸ್ ವಿಟ್ಲ, ಮುಖಂಡರಾದ ಸಾಧಿಕ್ ಬಂಟ್ವಾಳ , ಶೌಕತ್ ಆಲಿ ಖಾನ್, ಸಾಮಾಜಿಕ ಕಾರ್ಯಕರ್ತರಾದ ಸಮದ್ ಬಿ.ಸಿ.ರೋಡ್, ಇಸ್ಮಾಯಿಲ್ ಅರಬಿ ಬಂಟ್ವಾಳ ಮುಂತಾದವರಿದ್ದರು