ಬಂಟ್ವಾಳ: ಸಿದ್ಧಕಟ್ಟೆ ಸ.ಪ್ರ.ದ. ಕಾಲೇಜ್ ನ 2019-20 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರ ಹೆಣ್ಣೂರುಪದವಿನ ದ.ಕ. ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಶುಕ್ರವಾರ ಸಂಜೆ ಆರಂಭಗೊಂಡಿದ್ದು, ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ ಶಿಬಿರವನ್ನು ಉದ್ಘಾಟಿಸಿದರು.    ಬಳಿಕ ಮಾತನಾಡಿದ ಅವರು, ನಾಯಕತ್ವ ಬೆಳೆಸುವಲ್ಲಿ ಅಧ್ಯಾಪಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು. ಎನ್‌.ಎಸ್‌.ಎಸ್ ಯುವ ಜನರಲ್ಲಿ ದೇಶಾಭಿಮಾನ ಬೆಳೆಸುವ, ರಾಷ್ಟ್ರೀಯತೆಯನ್ನು ಬಿಂಬಿಸುವ ಕಾರ್ಯ ನಿರ್ವಹಿಸುತ್ತದೆ. ವಿದ್ಯಾರ್ಥಿಗಳು ಎನ್‌.ಎಸ್‌.ಎಸ್ ಮೂಲಕ ಪ್ರಾಮಾಣಿಕ ವ್ಯಕ್ತಿಗಳಾಗಿ ದೇಶ ಸೇವೆ ಮಾಡಬೇಕು ಎಂದು ಹೇಳಿದರು.

IMG-20191214-WA0062
ಅತಿಥಿಯಾಗಿದ್ದ ತಾ.ಪಂ. ಸದಸ್ಯ ಪ್ರಭಾಕರ ಪ್ರಭು ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಎನ್‌.ಎಸ್‌.ಎಸ್ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಸಮಾಜದಿಂದ ಗುರುತಿಸಲ್ಪಡುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಹೇಳಿದರು.
ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷ ದಿನೇಶ್  ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಸತ್ಯನಾರಾಯಣ ಭಟ್‌ ರವರು ಎನ್‌.ಎಸ್‌.ಎಸ್ ಮಹತ್ವವನ್ನು ವಿವರಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಸಂದೇಶ್ ಶೆಟ್ಟಿ, ಎಪಿಎಂಸಿ ಮಾಜಿ ಸದಸ್ಯ ರತ್ನ ಕುಮಾರ್ ಚೌಟ, ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಅಧ್ಯಕ್ಷ ಪದ್ಮರಾಜ್ ಬಳ್ಳಾಲ್,ಹೆಣ್ಣೂರುಪದವು ದ.ಕ.ಜಿ.ಪ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕ ವಿಜಯ ಭಂಡಾರಿ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ನಸೀಮಾ ಬೇಗಂ ಎಸ್. ಅವರು ಅಧ್ಯಕ್ಷತೆ ವಹಿಸಿದ್ದರು.
ಸಂಗಬೆಟ್ಟು ಗ್ರಾ.ಪಂ. ಸದಸ್ಯರಾದ ಎಸ್.ಪಿ ಶ್ರೀಧರ್, ಎನ್‌ಎಸ್‌ಎಸ್ ಯೋಜನಾಧಿಕಾರಿ ದೇವಿಪ್ರಸಾದ್, ಸಹ ಶಿಬಿರಾಧಿಕಾರಿ ಡಾ. ಶ್ರೀನಿವಾಸ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪೂವಪ್ಪ, ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸೇಸಪ್ಪ ಪೂಜಾರಿ, ಕುಕ್ಕಿಪಾಡಿ ಗ್ರಾ.ಪಂ. ಸದಸ್ಯ ಲಿಂಗಪ್ಪ, ಮಾಜಿ ಅಧ್ಯಕ್ಷೆ ರೇಖಾ, ರೋಟರಿ ಕ್ಲಬ್ ಸದಸ್ಯ ಸೀತಾರಾಮ ಶೆಟ್ಟಿ, ಎನ್‌ಎಸ್‌ಎಸ್ ಘಟಕದ ನಾಯಕ ದಿನೇಶ್ ಕೆ. ಉಪಸ್ಥಿತರಿದ್ದರು.
ಶಿಬಿರದ ನಾಯಕ ಗುರುಪ್ರಸಾದ್ ಸ್ವಾಗತಿಸಿ, ಶಿಬಿರಾರ್ಥಿ ಪ್ರಜ್ವಲ್ ವಂದಿಸಿದರು. ಎನ್‌ಎಸ್‌ಎಸ್ ಘಟಕದ ನಾಯಕಿ ನೀಮಾ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *