ಬಂಟ್ವಾಳ : ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ವಾರ್ಷಿಕ ಕ್ರೀಡೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಬಾಬರಿ ಮಸೀದಿ ಧ್ವಂಸ ಘಟನೆಯ ಮರುಸೃಷ್ಠಿಸಿದ ಆರೋಪದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸಹಿತ ವಿದ್ಯಾ ಕೇಂದ್ರದ ಆಡಳಿತ ಮಂಡಳಿಯ ಐವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಫ್‌ಐ ಕಲ್ಲಡ್ಕ ವಲಯದ ಸದಸ್ಯ ಅಬೂಬಕರ್ ಸಿದ್ದಿಕ್ ಎಂಬವರು ಸೋಮವಾರ ದೂರು ನೀಡಿದ್ದು, ಐಪಿಸಿ ಸೆಕ್ಷನ್ ೨೯೫ (ಎ) ಮತ್ತು ೨೯೮ರಂತೆ   ಪ್ರಕರಣ ದಾಖಲಾಗಿದೆ.

WhatsApp Image 2019-12-18 at 10.20.15

ಒಂದು ಸಮುದಾಯದ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸುವ ಉದ್ದೇಶದಿಂದ ಪವಿತ್ರ ವಸ್ತುಗಳನ್ನು ನಾಶ ಮಾಡಲು ಪ್ರಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ . ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಹಿರಿಯ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಶ್ರೀರಾಮ ಶಾಲಾ ಅಧ್ಯಕ್ಷ ನಾರಾಯಣ ಸೋಮಯಾಜಿ, ಶಾಲಾ ಸಂಚಾಲಕ ವಸಂತ ಮಾದವ, ಶಾಲಾ ಸಮಿತಿ ಸದಸ್ಯ ಚನ್ನಪ್ಪ ಕೋಟ್ಯಾನ್ ಹಾಗೂ ಮುಖ್ಯೋಪಾಧ್ಯಾಯರ ಮೇಲೆ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *