ಬಂಟ್ವಾಳ : ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಇದರ ವತಿಯಿಂದ ಡಿಸಿ ಮನ್ನಾ ಜಾಗದ ಸಮಸ್ಯೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆದ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿದರು. ಮುಂದಿನ ಅಧಿವೇಶನದಲ್ಲಿ ಡಿ.ಸಿ ಮನ್ನಾ ಭೂಮಿಯ ಸಮಸ್ಯೆಯ ಬಗ್ಗೆ ಸರಕಾರದ ಗಮನ ಸೇಳೆಯುವುದಾಗಿ ಭರವಸೆ ನೀಡಿದರಲ್ಲದೆ ತಹಶಿಲ್ದಾರರ ಮೂಲಕ ನ್ಯಾಯಯುತವಾದ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದರು.
