ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳಾ ಅಂತರ್ ಕಾಲೇಜು ಹ್ಯಾಂಡ್ಬಾಲ್ ಪಂದ್ಯಾಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆ: ಸಚಿವ ರೈ
ಗ್ರಾಮೀಣ ಪ್ರದೇಶದಲ್ಲಿ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ಪ್ರೋತ್ಸಾಹ ಮತ್ತು ತರಬೇತಿ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳಾ ಅಂತರ್ ಕಾಲೇಜು ಹ್ಯಾಂಡ್ಬಾಲ್ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಪಿ.ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೈಹಿಕ ಶಿಕ್ಷಣ ನಿದೇರ್ಶಕರ ಸಂಘದ ಅಧ್ಯಕ್ಷ ಪುರುಷೋತ್ತಮ ಪೂಜಾರಿ, ಪ್ರಮುಖರಾದ ಜಯಪ್ರಕಾಶ ಶೆಟ್ಟಿ ಬುಳೇರಿ, ನವೀನಚಂದ್ರ ಶೆಟ್ಟಿ ಮತ್ತಿತರರು ಇದ್ದರು.
ಇದೇ ವೇಳೆ ಕ್ರೀಡಾ ಪ್ರತಿಭೆ ಸುಶ್ಮಿತಾ ಇವರನ್ನು ಸನ್ಮಾನಿಸಲಾಯಿತು.
ಉಪನ್ಯಾಸಕರಾದ ಪ್ರೊ. ಕೆ.ಹರಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಡಾ. ಟಿ.ಕೆ. ಶರತ್ಕುಮಾರ್ ವಂದಿಸಿದರು. ಡಾ.ಸುಬ್ರಹ್ಮಣ್ಯ ಕೆ. ಕಾರ್ಯಕ್ರಮ ನಿರೂಪಿಸಿದರು.
