ಬಂಟ್ವಾಳ :ಹೊಟ್ಟೆನೋವು ಹಾಗೂ ಮೂತ್ರಪಿಂಡದ ಸಮಸ್ಯೆ ಯಿಂದ ಬಳಲುತ್ತಿದ್ದ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಸಿದ್ದಕಟ್ಟೆ ಸಮೀಪದ ಸಂಗಬೆಟ್ಟು ಎಂಬಲ್ಲಿ ಇಂದು ನಡೆದಿದೆ.
ಬಿಹಾರ ಮೂಲದ ಮನನ್ ಮಿಯಾ(25) ಮೃತಪಟ್ಟ ಯುವಕ.ತಾಲೂಕಿನ ಸಂಗಬೆಟ್ಟು ಗ್ರಾಮದ ಗಾಡಿಪಲ್ಕೆ ಎಂಬಲ್ಲಿ ಪಲ್ಗುಣಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಕಾಮಗಾರಿಯ ಕೆಲಸಕ್ಕೆಂದು ಈತ ಬಂದಿದ್ದು, ವಿಪರೀತ ಹೊಟ್ಟೆನೋವಿನಿಂದ ಬಳಲುತ್ತಿದ್ದು ಈತನನ್ನು ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ಮೂಡಬಿದಿರೆಯ ಖಾಸಗಿ ಆಸ್ಪತ್ರೆ ಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ .ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.