ಬಂಟ್ವಾಳ: ಹೊರರಾಜ್ಯದಿಂದ ಆಗಮಿಸುವ ಬಂಟ್ವಾಳ ಸುತ್ತಮುತ್ತಲಿನ ನಾಗರೀಕರ ಕ್ವಾರಂಟೈನ್ ವ್ಯವಸ್ಥೆಯ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ ವಸತಿಗೃಹಗಳ ಮಾಲಕರ ಸಭೆಯು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಬಿ.ಸಿ.ರೋಡ್ ಕಚೇರಿಯಲ್ಲಿ ಸೋಮವಾರ ನಡೆಯಿತು.
ಕ್ವಾರಂಟೈನ್ ನಲ್ಲಿರುವವರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಶಾಸಕ ರಾಜೇಶ್ ನಾಯ್ಕ್ ಅವರು ಸೂಚಿಸಿದರು. ಈ ಸಂದರ್ಭ ತಾಲೂಕು ತಹಶೀಲ್ದಾರ್ ರಶ್ಮೀ ಎಸ್.ಆರ್.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರು ಸೂಕ್ತ ಸಲಹೆ,ಸೂಚನೆಗಳನ್ನಿತ್ತರು. ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ,ಬಂಟ್ವಾಳ ನಗರ ಠಾಣೆಯ ಎಸ್ ಐ ಅವಿನಾಶ್, ಶಾಸಕರ ಆಪ್ತ ಕಾರ್ಯದರ್ಶಿ ದಿನೇಶ್ ವಿವಿಧ ವಸತಿಗೃಹಗಳ ಮಾಲಕರು ಸಭೆಯಲ್ಲಿ ಭಾಗವಹಿಸಿದರು.