ಬಂಟ್ವಾಳ: ಸರಕಾರದ ಅನುದಾನವನ್ನು ಪೂರ್ಣವಾಗಿ ಬಳಸಿಕೊಂಡು ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬಂಟ್ವಾಳ ತಾಪಂ ನ ಎಸ್ ಜಿಎಸ್ ವೈ ಸಭಾಂಗಣದಲ್ಲಿ ಶುಕ್ರವಾರ ನಡೆದ 14 ನೇ ಹಣಕಾಸು ಯೋಜನೆಯ ಕಾಮಗಾರಿಗಳ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

IMG_20200606_111154 (1)2015-16 ರಿಂದ2019-20 ರವರೆಗಿನ 14 ನೇ ಹಣಕಾಸು ಯೋಜನೆಯ ಅನುದಾನ ಈಗಾಗಲೇ ಗ್ರಾಮಪಂಚಾಯತ್ ನ ಖಾತೆಗೆ ಬಿಡುಗಡೆಯಾಗಿದ್ದು,ಇದರ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಬಿಲ್ ನ್ನು ನೀಡುವಂತೆ ತಿಳಿಸಿದರು. ಅಧಿಕಾರಿಗಳು ಸಭೆಗೆ ಹಾಜರಾಗುವ ಸಂದರ್ಭದಲ್ಲಿ ಪೂರ್ಣ ಮಾಹಿತಿ ಹಾಗೂ ದಾಖಲೆಯೊಂದಿಗೆ ಅಗಮಿಸಬೇಕು ಎಂದು ತಾಪಂ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಅವರು ಪಿಡಿಒಗಳಿಗೆ ಸೂಚಿಸಿದರು.ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಸಲಿ,ಸ್ಥಾಯಿಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ,ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ತಾರನಾಥ ಸಾಲ್ಯಾನ್ ವೇದಿಕೆಯಲ್ಲಿದ್ದರು.

By suddi9

Leave a Reply

Your email address will not be published. Required fields are marked *