ಬಂಟ್ವಾಳ: ಸೋಮವಾರ ಬೆಂಗಳೂರಿನ ಕಿಯೋನಿಕ್ಸ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿರುವ ಹರಿಕೃಷ್ಣ ಬಂಟ್ವಾಳ ಅವರು ಜೂ.17ರಂದು ಬುಧವಾರ ಹುಟ್ಟೂರಿಗೆ ಆಗಮಿಸಲಿದ್ದಾರೆ.
ಬಳಿಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹಾಗೂ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಪಕ್ಷ ಪ್ರಮುಖರು , ಕಾರ್ಯಕರ್ತರನ್ನು ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ಭೇಟಿಯಾಗಲಿದ್ದಾರೆ. ನಂತರ ಮಂಗಳೂರಿನ ಕಂಕನಾಡಿ ಗರಡಿ ಕ್ಷೇತ್ರ, ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡುವರು. ಬಳಿಕ ಜಿಲ್ಲಾ ಬಿಜೆಪಿ ಕಚೇರಿ , ಸಂಘನಿಕೇತನಕ್ಕೂ ಭೇಟಿ ನೀಡಲಿರುವರು ಎಂದು ಪ್ರಕಟಣೆ ತಿಳಿಸಿದೆ.
