ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪರವಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರದಿಂದ ಚುವಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಯ್ಗಡ್ ಜಿಲ್ಲೆಯ ಮಹದ್ ಗ್ರಾಮದಿಂದ ರಾಹುಲ್ ಚುನಾವಣಾ ರ್ಯಾಲಿ ನಡೆಸಲಿದ್ದು, ಲಾಥುರ್ನಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ಶಿವಸೇನೆ ಮತ್ತು ಬಿಜೆಪಿ ಪೈಪೋಟಿ ನಡುವೆ ಕಾಂಗ್ರೆಸ್ ನಾಯಕನ ಕಸರತ್ತು ಮಹಾ ಚುನಾವಣೆ ಮೇಲೆ ಪ್ರಭಾವ ಬೀರಲಿದೆಯೇ ಎಂಬುದು ಕಾದು ನೋಡಬೇಕಿದೆ.
ಒಟ್ಟಾರೆ ದಿನಕಳೆದಂತೆ ಮಹಾರಾಷ್ಟ್ರ ವಿಧಾನಸಭಾ ಕಣ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳ ಕೆಸರೆರಚಾಟ ಜೋರಾಗುತ್ತಿದೆ. ಇದೇ ಅಕ್ಟೋಬರ್ 15ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು, 13ರಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ದಿನಾಂಕ 17ರಂದು ಫಲಿತಾಂಶ ಪ್ರಕಟವಾಗಲಿದೆ.

rahu

By suddi9

Leave a Reply

Your email address will not be published. Required fields are marked *