ಬಂಟ್ವಾಳ:ಸಮಾಜದಲ್ಲಿ ಪ್ರತಿಯೊಬ್ಬರು ಕೂಡಾ ಪರಸ್ಪರ ಸಮಾನತೆಯಿಂದ ಬೆಳೆದು ನಿಲ್ಲುವುದಕ್ಕೆ ಮಹಷರ್ಿ ವಾಲ್ಮೀಕಿ ಜಯಂತಿ ಮತ್ತಿತರ ಆಚರಣೆಗಳು ಪೂರಕವಾಗಿದ್ದು, ಆ ಮೂಲಕ ಕೆಳಸ್ತರದ ಸಮುದಾಯಗಳಿಗೆ ಸ್ವಾಭಿಮಾನ ಮೂಡಿಸುವಲ್ಲಿ ಕೂಡಾ ಸಹಕಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಬುಧವಾರ ಏರ್ಪಡಿಸಿದ್ದ ‘ವಾಲ್ಮೀಕಿ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

8btl-1
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಯಶವಂತ ದೇರಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾರಾಯಣ ಗೌಡ ವಿಶೇಷ ಉಪನ್ಯಾಸ ನೀಡಿದರು. ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ, ಮಾಜಿ ಉಪಾಧ್ಯಕ್ಷ ಆನಂದ ಶಂಭೂರು, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಆರ್.ಚೆನ್ನಪ್ಪ ಕೋಟ್ಯಾನ್, ಪುರಸಭಾಧ್ಯಕ್ಷೆ ವಸಂತಿ, ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ ಮತ್ತಿತರರು ಇದ್ದರು.

 

By suddi9

Leave a Reply

Your email address will not be published. Required fields are marked *