ಕೈಕಂಬ: ಕಳೆದ ಬಾರಿ ಎಡಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಆಳ್ವಾಸ್ ನುಡಿಸಿರಿಗೆ ಈ ಬಾರಿ ಎಡಪಂಥೀಯ ಸಾಹಿತಿಯನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಲಾಗಿದೆ. ನವೆಂಬರ್ 14, 15 ಜಾಗೂ 16 ರಂದು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ನಡೆಯಲಿದೆ. ಇದನ್ನು ಮಡಿಕೇರಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ. ನಾ. ಡಿ’ಸೋಜ ಸಮ್ಮೇಳನ್ನು ಉದ್ಘಾಟಿಸಲಿದ್ದಾರೆ.

`ಕರ್ನಾಟಕ: ವರ್ತಮಾನದ ತಲ್ಲಣಗಳು’ ಎಂಬ ಪರಿಕಲ್ಪನೆಯಲ್ಲಿ ಈ ಬಾರಿಯ ನುಡಿಸಿರಿ ನಡೆಯಲಿದೆ.

sidd

 

ವಿದ್ಯಾರ್ಥಿ ಪ್ರತಿನಿಧಿಗಳಿಗೆ ಸಂಪೂರ್ಣ ಉಚಿತವಾಗಿ, ಇತರ ಪ್ರತಿನಿಧಿಗಳಿಗೆ 100 ರೂಪಾಯಿ ಪ್ರತಿನಿಧಿ ಶುಲ್ಕದೊಂದಿಗೆ ಮೂರು ದಿನಗಳ ಕಾಲ ವಸತಿ, ಊಟೋಪಚಾರದ ವ್ಯವಸ್ಥೆಯನ್ನೂ ಇಲ್ಲಿ ಕಲ್ಪಿಸಲಾಗುತ್ತದೆ. ನಾಡಿನ ಪ್ರಸಿದ್ಧ ಸಾಹಿತಿಗಳು, ವಿದ್ವಾಂಸರು, ಕವಿಗಳು ಈ ಸಮ್ಮೇಳನಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸುಂದರ ಸಮ್ಮೇಳನದಲ್ಲಿ ಕನ್ನಡ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ತಿಳಿಸಿದ್ದಾರೆ

By suddi9

Leave a Reply

Your email address will not be published. Required fields are marked *