ಬಂಟ್ವಾಳ:  ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಹಾಗೂ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಾಮ್ಮಾಯಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಚಲನಚಿತ್ರ ಕಾರ್ಯಕ್ರಮವು ಬರಿಮಾರು ಶಾಲೆಯಲ್ಲಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ  ಶಶಿ ಪ್ರಭಾ ಅವರು ವಹಿಸಿದ್ದರು 011

ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ  ಸತೀಶ್ ಶೆಟ್ಟಿ ಅವರು ಉದ್ಘಾಟಿಸಿ ಗ್ರಾಮಾಭಿವೃದ್ಧಿ ಯೋಜನೆಯ ಅಭಿವೃದ್ಧಿ ಕಾರ್ಯಗಳ ಕಾರ್ಯಕ್ರಮಗಳನ್ನು ವಿವರಿಸಿದರಲ್ಲದೆ ಯೋಜನೆಯು ಧರ್ಮಸ್ಥಳದ ಧರ್ಮಾಧಿಕಾರಿಡಾ.ಹೆಗ್ಗಡೆಯವರ ಕನಸಿನ ಕೂಸು ಇದನ್ನು ನನಸು ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ಶಾಲಾ ಮುಖ್ಯೋಪಾಧ್ಯಾಯರಾದ  ಕಲ್ಯಾಣಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ  ನಳಿನಾಕ್ಷಿ ಶೆಟ್ಟಿ    ನಿರೂಪಿಸಿ ವಲಯ ಮೇಲ್ವಿಚಾರಕಿ  ಪ್ರೇಮ ರವರು ಸ್ವಾಗತಿಸಿ, ಸೇವಾ ಪ್ರತಿನಿಧಿ  ಗೀತಾ ಅವರು ವಂದಿಸಿದರು

By suddi9

Leave a Reply

Your email address will not be published. Required fields are marked *