ಪೊಳಲಿ: ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರವನ್ನು ಸುಚಿಗೊಳಿಸುವ ಮೂಲಕ ಸ್ವಚ್ಛ ಭಾರತ್ ಕಾರ್ಯಕ್ರಮವನ್ನು ಅ. 2ರಂದು ಶುಕ್ರವಾರ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಯುವಮೋರ್ಚಾ ಅಧ್ಯಕ್ಷರಾದ ಪ್ರದೀಪ್ ಅಜ್ಜಿಬೆಟ್ಟು,ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ, ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಚಂದ್ರವತಿ ಪೊಳಲಿ ,ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ದಂಬೆದಾರು ,ಜಿಲ್ಲಾ ಯುವಮೋರ್ಚಾ ಸದಸ್ಯರಾದ ಕಿಶೋರ್ ಪಲ್ಲಿಪ್ಪಾಡಿ ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಿದರು.