ಬಂಟ್ವಾಳ :ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಇದರ ಬಂಟ್ವಾಳ  ತಾಲೂಕು ಘಟಕದ ವತಿಯಿಂದ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು  ಈಡೇರಿಸುವಂತೆ ಒತ್ತಾಯಿಸಿ ನಡೆಯತ್ತಿರುವ ಅನಿರ್ಧಿಷ್ಠಾವಧಿ ಮುಷ್ಕರ12 ದಿನಕ್ಕೆ ಕಾಲಿಟ್ಟಿದ್ದು,ಸೋಮವಾರವು ಬಿ ಸಿ ರೋಡಿನ ಮಿನಿ ವಿಧಾನಸೌಧದ ಮುಂಭಾಗ  ಪ್ರತಿಭಟನೆ ನಡೆಯಿತು.IMG-20201005-WA0057
 ಆರೋಗ್ಯ ಇಲಾಖೆ ವೈದ್ಯಕೀಯ  ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಅರೆವೈದ್ಯಕೀಯ  ಮತ್ತು ಇತರ ನಿರ್ವಹಣೆ ಹಾಗೂ ಕಚೇರಿ ಸಿಬ್ಬಂದಿಗಳು ಹಲವಾರು ವರ್ಷಗಳಿಂದ ಅವರ ಬೇಡಿಕೆಗಳಾದ ಸಮಾನ ಕೆಲಸಕ್ಕೆ ಸಮಾನ ವೇತನ,  ಸೇವಾ ಭದ್ರತೆ ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದ್ದು, ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ಮಾಡುತ್ತಿದ್ದು , ಆದರೆ ಇದುವರೆಗೂ ಸರಕಾರ ಸ್ಪಂದಿಸದಿರುವುದರಿಂದ ಸರಕಾರ ಸ್ಪಂದಿಸದಿರುವುದು ವಿಷಾದನೀಯ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. IMG-20201005-WA0058
 ಸಂಘದ ಅಧ್ಯಕ್ಷ ಡಾ. ಪ್ರಕಾಶ್ ಕುಮಾರ್ ಕಾರ್ಯದರ್ಶಿ ವಿಶ್ವನಾಥ ಪ್ರಮುಖರಾದ ಶಿಲ್ಪ ಬಿ.ರಾವ್, ಡಾ.ಹೇಮ ಪ್ರಭ, ಡೇವಿಡ್  ಡಿಸೋಜಾ ಮತ್ತಿತರರು ಹಾಜರಿದ್ದರು.

By suddi9

Leave a Reply

Your email address will not be published. Required fields are marked *