ಬಂಟ್ವಾಳ:ನೆಮ್ಮದಿಯ ಬದುಕಿಗಾಗಿ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಎಂದು ಬಂಟ್ವಾಳ ಕ್ಷೇತ್ರದ ಶಾಸಕ  ರಾಜೇಶ್ ನಾಯಕ್ ಉಳಿಪಾಡಿಗುತ್ತುರವರು ಹೇಳಿದ್ದಾರೆ.    ಬೋಳಂತೂರು ಗ್ರಾಮದ ಬಿ ಆರ್ ನಗರದ ಮಹಮ್ಮಾಯಿ ಕ್ಷೇತ್ರದ ವಠಾರದಲ್ಲಿ ನಡೆದ ಬಿಜೆಪಿ ಶಕ್ತಿ ಕೇಂದ್ರದ ಕುಟುಂಬ ಮಿಲನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಕಾರ್ಯಕ್ರಮವನ್ನು   ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ   ದೇವಪ್ಪ ಪೂಜಾರಿ ಉದ್ಘಾಟಿಸಿದರು .IMG-20201020-WA0106 (1)

ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಮಂಡಲ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಜಿಲ್ಲಾ ಹಿಂದುಳಿದ ಮೋರ್ಚಾದ ಕಾರ್ಯದರ್ಶಿ ಉದಯಕುಮಾರ್ ನಗ್ರಿ, ಉಪಸ್ಥಿತರಿದ್ದರು.ಗಾಯತ್ರಿ ಕೆ ಪ್ರಾರ್ಥಿಸಿ, ಬೋಳಂತೂರು ಗ್ರಾಮದ ಸಹ-ಪ್ರಭಾರಿ  ಜಯರಾಮ ರೈ ಸ್ವಾಗತಿಸಿ ,ಕ್ಷೇತ್ರ ಸಮಿತಿಯ ಉಪಾಧ್ಯಕ್ಷ ಶೋಭಾ ಶಿವಪ್ಪ ವಂದಿಸಿದರು.  ಬಾಲಕೃಷ್ಣ  ಸರ್ಕಳ ಕಾರ್ಯಕ್ರಮ ನಿರ್ವಹಿಸಿದರು.

By suddi9

Leave a Reply

Your email address will not be published. Required fields are marked *