ಬಂಟ್ವಾಳ:ದೇವಸ್ಥಾನಗಳ ಸಂಪರ್ಕ ರಸ್ತೆಯನ್ನು ಆಧ್ಯತೆಯ ನೆಲೆಯಲ್ಲಿ ಅಭಿವೃದ್ದಿ ಪಡಿಸಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ಉಳಿಪ್ಪಾಡಿಗುತ್ತು ಅವರು ಹೇಳಿದ್ದಾರೆ.  ಶಾಸಕರ ವಿಶೇಷ ಅನುದಾನದಡಿ  20 ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟೀಕರಣಗೊಳಿಸಿ ಅಭಿವೃದ್ದಿಪಡಿಸಲಾದ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ಶ್ರೀ ಮುಖ್ಯಪ್ರಾಣ ದೇವಸ್ಥಾನವನ್ನು ಸಂಪರ್ಕಿಸುವ ಉರುಡಾಯಿ ರಸ್ತೆಯನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, ಬಂಟ್ವಾಳ ಕ್ಷೇತ್ರದ ಬಹುತೇಕ ಧಾರ್ಮಿಕ ಕೇಂದ್ರಗಳ ರಸ್ತೆಗಳನ್ನು ಅಭಿವೃದ್ದಿ ಪಡಿಸಲಾಗಿದ್ದು,ಗ್ರಾಮೀಣ ರಸ್ತೆಯನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಪ್ರತಿ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಲಾಗುತ್ತಿದೆ ಎಂದರು.IMG-20201116-WA0077

ಈ ಭಾಗದ ಬಹುಕಾಲದ ಬೇಡಿಕೆಯಲ್ಲೊಂದಾದ ಉರುಡಾಯಿ ರಸ್ತೆ ಕಾಂಕ್ರೀಟಿಕರಣಗೊಂಡು ಅಭಿವೃದ್ದಿಯಾಗಿರುವುದು ಇಲ್ಲಿನ ಜನತೆಯ ಮುಖದಲ್ಲು ಸಂತಸ ಕಾಣುತ್ತಿದೆ ಎಂದ ಶಾಸಕರು ಉರುಡಾಯಿಯಿಂದ ಕಾವಳಕಟ್ಟೆಯನ್ನು ಸಂಪರ್ಕ ರಸ್ತೆಯನ್ನು ಅಭಿವೃದ್ದಿಪಡಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.ನಾನೊಬ್ಬ ರೈತ ಎನ್ನುವುದಕ್ಕೆ ನನಗೆ ಹೆಮ್ಮೆ ಮತ್ತು ಸಂತಸ ಇದೆ. ಈ ವಿಚಾರದಲ್ಲಿ ನನಗೆ ಯಾರ ಸರ್ಟಿಫಿಕೇಟ್ ಬೇಡ  ಎಂದು ಹೇಳಿದ ರಾಜಕೀಯ ವಿರೋಧಿಗಳ ಟೀಕೆಗೆ ತಲೆ ಕಡೆಸಿಕೊಳ್ಳದೆ ಅಭಿವೃದ್ದಿ ಕಾರ್ಯದ ಮೂಲಕ ಉತ್ತರಿಸಲಾಗುವುದು ಎಂದರು.  ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ ಕ್ಷೇತ್ರದಅಭಿವೃದ್ಧಿಯ ಚಿಂತನೆಯಿಂದೊಂದಿಗೆ ಶಾಸಕರು ಕಾರ್ಯನಿರ್ವಹಿಸುತ್ತಾರೆ.

ಪಕ್ಷ ಸಂಘಟನೆಯ ಮೂಲಕ  ವಿರೋಧ ಪಕ್ಷಗಳಿಗೆ ಉತ್ತರ ನೀಡಲಿದೆ.ಮುಂದಿನ ಗ್ರಾಪಂ ಚುನಾವಣೆಯಲ್ಲಿ  ಚೆನ್ನೈತ್ತೋಡಿ ಗ್ರಾಪಂನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರನ್ನು ಆಯ್ಕೆಗೊಳಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ ಮಾತನಾಡಿ ಶಾಸಕರ ಅವಧಿಯಲ್ಲಿ ಗ್ರಾಮೀಣ ಭಾಗದ ಮೂಲೆಮೂಲೆಯ ಅಭಿವೃದ್ಧಿ ಕಾರ್ಯ ಗಳು ನಡೆಯುತ್ತಿದ್ದು,ಜನರ ಸಹಕಾರವು ಅಗತ್ಯವಿದೆ ಎಂದರು.ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ ಅವರು ಮಾತನಾಡಿ  ರಾಜೇಶ್ ನಾಯ್ಕ್ ಅವರು ಶಾಸಕರಾದ ಬಳಿಕ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಪೂರಕವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯವು ಆಗಿದೆ ಎಂದು ಹೇಳಿದರು.

ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್,ಕ್ಷೇತ್ರ ಬಿಜೆಪಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ,   ದೇವಸ್ಥಾನದ ಆಡಳಿತ ಮೋಕ್ತೇಸರ  ಜಯರಾಮ ಕುಲಾಲ್ , ಅರ್ಚಕ ನಾರಾಯಣ ಶಿಬಿರಾಯ ಮತ್ತಿತರು ವೇದಿಕೆಯಲ್ಲಿದ್ದರು.ಪುರುಷೋತ್ತಮ ಶೆಟ್ಟಿ ವಾಮದಪದವು,ರಮಾನಾಥ ರಾಯಿ, ಗಣೇಶ್ ರೈ ಮಾಣಿ,  ಸೀತಾರಾಮ ಪೂಜಾರಿ,ಪ್ರಭಾಕರ ಶೆಟ್ಟಿ ಮೊದಲಾದವರೊದ್ದರು.
ಸುರೇಶ್ ಉರುಡಾಯಿ ಸ್ವಾಗತಿಸಿ, ಮಹಾಬಲ ಕುಲಾಲ್ ವಂದಿಸಿದರು.

By suddi9

Leave a Reply

Your email address will not be published. Required fields are marked *