ಬಂಟ್ವಾಳ: ಮಂಗಳೂರು ಮತ್ತು ಬಂಟ್ವಾಳವನ್ನು ಸಂಪರ್ಕಿಸುವ ಮುಲಾರಪಟ್ನ ಸೇತುವೆಯ ಮುಂದಿನ ಮೇ ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಎಂದು ಹೇಳಿದ್ದಾರೆ.ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಮುಲಾರಪಟ್ನ ಆಝಾದನಗರದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖಾ ವತಿಯಿಂದ 2.35 ಕೋಟಿ ರೂ ವೆಚ್ಚ ದಲ್ಲಿ ನಿರ್ಮಾಣವಾಗಲಿರುವ ಮೌಲನಾ ಆಝಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡಕ್ಕೆ ಮಂಗಳವಾರ ಶಿಲಾನ್ಯಾಸ ನೆರವೇರಿಸಿ ಶಾಸಕರು ಮಾತನಾಡಿದರು.
ಮುಲ್ಲಾರಪಟ್ಣ ಸೇತುವೆ ಕುಸಿತದಿಂದ ಈ ಭಾಗದ ಜನರಿಗೆ ತೊಂದರೆಯಾಗಿದ್ದು, ವಿಶೇಷ ಮುತುವರ್ಜಿ ವಹಿಸಿ ಸೇತುವೆ ನಿರ್ಮಾಣಕ್ಕೆ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಲಾಗಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆಯು ಮುಗಿದು ಕಾಮಗಾರಿ ಆರಂಭಗೊಂಡಿದ್ದು ಮುಂದಿನ ಮೇ ತಿಂಗಳ ಒಳಗಾಗಿ ಪೂರ್ಣಗೊಂಡು ಸಾರ್ವಜನಿಕರ ಸದುಪಯೋಗಕ್ಕೆ ಸಿಗಲಿದೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಅಲ್ಪಸಂಖ್ಯಾತ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮುಲಾರಪಟ್ನದಲ್ಲಿ ನೂತನ ಕಟ್ಟಡ ನಿರ್ಮಾಣ ವಾಗಲಿದ್ದು ಮುಂದಿನ ಶಿಕ್ಷಣಿಕ ಅವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು. ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಮುಖ್ಯ ಅತಿಥಿ ಯಾಗಿ ಭಾಗವಹಿಸಿದರು.
ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಜೆ.ಎಚ್.ಎಮ್ ಫೌಂಡೇಷನ್ ಅಧ್ಯಕ್ಷ ಹಂಝ, ನಿರ್ಮಿತಿ ಕೇಂದ್ರದ ಕಾರ್ಯಕಾರಿಣಿ ನಿರ್ದೇಶಕ ರಾಜೇಂದ್ರ ಕಲ್ಬಾವಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಹಮ್ಮದ್, ಹಾಜಬ್ಬ, ಜುಮಾ ಮಸೀದಿ ಅಧ್ಯಕ್ಷ, ಗುತ್ತಿಗೆದಾರ ಅಶ್ರಪ್ಸ. ಹಿ.ಪ್ರಾಥಮಿಕ ಉರ್ದು ಶಾಲೆಯ ಮುಖ್ಯ ಶಿಕ್ಷಕಿ ಶಾಲಾ ಸಮೀನಾ ಅಖ್ತರ್, ಉರ್ದು ಶಾಲಾ ಮತ್ತು ಮೌಲಾನಾ ಆಜಾದ್ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.ಅಲ್ಪ ಸಂಖ್ಯಾತ ಇಲಾಖಾ ಕಲ್ಯಾಣಾಧಿಕಾರಿ ಖಾದರ್ ಶಾ ಸ್ವಾಗತಿಸಿದರು.ಶಿಕ್ಷಕಿ ಕುಸುಮಾ ವಂದಿಸಿದರು. ಮೌಲನಾ ಅಂಗ್ಲ ಮಾಧ್ಯಮ ಮುಖ್ಯಶಿಕ್ಷಕ ಮಹಮ್ಮದ್ ಹನೀಫ್ ಕಾರ್ಯ ಕ್ರಮ ನಿರೂಪಣೆ.
